ಶಿವಮೊಗ್ಗ ಜಿಪಂ ಸಭಾಂಗಣದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಯು.ಟಿ.ಖಾದರ್ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ನಡೆಸಿದರು. ಆರಗ ಜ್ಞಾನೇಂದ್ರ, ಎಸ್.ಚನ್ನಬಸಪ್ಪ, ಡಿ.ಎಸ್.ಅರುಣ್, ಜಿ.ಪಲ್ಲವಿ, ಪ್ರಭುಲಿಂಗ ಕವಳಿಕಟ್ಟಿ ಇದ್ದರು.  
ಶಿವಮೊಗ್ಗ

ಬಾಣಂತಿ ಸಾವಿನ ಉನ್ನತ ತನಿಖೆಗೆ ಆದೇಶ | Mother's death

ಪ್ರಮುಖ ಮುಖ್ಯಾಂಶಗಳು

  • ಕೊಡೂರು ಸಮೀಪದ ಶಾಖವಲ್ಲಿಯ ಸುಮಾ ಪ್ರಕರಣ ವೈದ್ಯರಿಗೆ ಪಾಠ
  • ಆರೋಗ್ಯ ಇಲಾಖೆಯ ವೈದ್ಯಾಧಿಕಾರಿಗಳು ಹಾಗೂ ತಂತ್ರಜ್ಞರೊಂದಿಗೆ ಸಭೆ
  • ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಯು.ಟಿ.ಖಾದರ್ ಸೂಚನೆ
ಶಿವಮೊಗ್ಗ: ಬಾಣಂತಿ ಅಥವಾ ಮಗುವಿನ ಸಾವು ಯಾವುದೇ ಸರ್ಕಾರಕ್ಕೂ ಸಮಾಧಾನ ತರುವ ವಿಷಯವಲ್ಲ. ಹಾಗಾಗಿ ಕೊಡೂರು ಸಮೀಪದ ಶಾಖವಲ್ಲಿಯ ಬಾಣಂತಿ ಸುಮಾ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿ ಹಾಗೂ ರಾಜ್ಯಮಟ್ಟದ ಅಧಿಕಾರಿಗಳು ಅಥವಾ ತಜ್ಞ(State-level officials or experts)ರಿಂದ ತನಿಖೆ ನಡೆಸಿ ವರದಿ ಪಡೆದು ಅಗತ್ಯ ಕ್ರಮಕೈಗೊಳ್ಳುವುದಾಗಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಯು.ಟಿ.ಖಾದರ್(Health and Family Welfare Minister U.T. Khader) ಹೇಳಿದರು.
ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಶನಿವಾರ ಆರೋಗ್ಯ ಇಲಾಖೆಯ ವೈದ್ಯಾಧಿಕಾರಿಗಳು ಹಾಗೂ ತಂತ್ರಜ್ಞರೊಂದಿಗೆ ಸಭೆ ನಡೆಸಿದ ಅವರು, ವೈದ್ಯಕೀಯ ಕ್ಷೇತ್ರ(Medical field)ದಲ್ಲಿ ಅಸಾಧಾರಣ ಸೇವಾ ಸೌಲಭ್ಯಗಳು ಲಭ್ಯವಿದ್ದಾಗಲೂ ಪ್ರಜ್ಞಾವಂತರ ಜಿಲ್ಲೆಯಾಗಿರುವ ಶಿವಮೊಗ್ಗದಲ್ಲಿ ಇಂತಹ ಘಟನೆಗಳು ಮರುಕಳುಹಿಸದಂತೆ ಮುಂಜಾಗ್ರತಾ ಕ್ರಮ ವಹಿಸಬೇಕು ಎಂದು ಎಚ್ಚರಿಕೆ ನೀಡಿದರು.
ತಜ್ಞ ವೈದ್ಯರನ್ನೊಳಗೊಂಡ ಪರಿಣಿತ ತಂಡ ಮೆಗ್ಗಾನ್ ಆಸ್ಪತ್ರೆ(Meggan Hospital)ಯಲ್ಲೇ ಇದ್ದಾಗಲೂ ಚಿಕಿತ್ಸೆಗೆ ಬರುವ ರೋಗಿಗಳಿಗೆ ಸಕಾಲದಲ್ಲಿ ಸಿಗದೆ ಬೇರೆಡೆಗೆ ಚಿಕಿತ್ಸೆಗಾಗಿ ಶಿಫಾರಸ್ಸು ಮಾಡುವ ವೈದ್ಯರ ಕ್ರಮ ಸರಿಯಲ್ಲ. ಎಲ್ಲ ವ್ಯವಸ್ಥೆಗಳಿರುವ ವೈದ್ಯಕೀಯ ಕಾಲೇಜು ಇಲ್ಲಿರುವಾಗ ರೋಗಿಗಳು ಬೇರೆಡೆಗೆ ಹೋಗುವುದನ್ನು ಒಪ್ಪಿಕೊಳ್ಳಲಾಗುವುದಿಲ್ಲ. ಇನ್ಮುಂದೆಯಾದರೂ ತೀವ್ರ ಹಾಗೂ ಗಂಭೀರ ಸ್ವರೂಪದ ಕಾಯಿಲೆ ಅಥವಾ ಅಪಘಾತ(Serious illness or accident)ಗಳ ಸಂದರ್ಭದಲ್ಲಿ ವೈದ್ಯರು ಜನಸೇವೆಗೆ ಸದಾ ಸಿದ್ಧರಾಗಿರಬೇಕು ಎಂದು ಸಲಹೆ ನೀಡಿದರು.
ಜಿಲ್ಲೆಯಲ್ಲಿ ಡೇಂಘಿ(Dengue), ಚಿಕೂನ್‌ಗುನ್ಯಾ(Chikungunya), ಮಲೇರಿಯಾ( Malaria) ಮುಂತಾದ ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಅಗತ್ಯವಾಗಿರುವ ಔಷಧಗಳ ದಾಸ್ತಾನು ಇದೆ. ಈ ಕಾಯಿಲೆಗಳ ನಿಯಂತ್ರಣ ಕ್ರಮವಾಗಿ ವೈದ್ಯಕೀಯ ಸಿಬ್ಬಂದಿ ಜನರಲ್ಲಿ ಸ್ವಚ್ಛತೆ ಕುರಿತು ಅರಿವು ಮೂಡಿಸುವುದು ಸೊಳ್ಳೆಗಳ ನಿಯಂತ್ರಣ(Mosquito control) ಕ್ರಮದ ಮೊದಲ ಹೆಜ್ಜೆಯಾಗಿದೆ. ಅಗತ್ಯವಿರುವೆಡೆ ಸೊಳ್ಳೆಗಳ ನಿಯಂತ್ರಣಕ್ಕೆ ಫಾಗಿಂಗ್ ಯಂತ್ರಗಳನ್ನು ಬಳಸಬೇಕು. ಸ್ಥಳೀಯ ಸಂಸ್ಥೆಗಳು ಅಂಗಡಿ ಮುಂಗಟ್ಟುಗಳ ಪರವಾನಗಿ ನೀಡುವ ಸಂದರ್ಭದಲ್ಲಿ ಸ್ವಚ್ಛತೆಯ ಕುರಿತು ನಿಬಂಧಗಳನ್ನು ವಿಧಿಸಬೇಕು. ತಪ್ಪಿದಲ್ಲಿ ನಿರ್ದಾಕ್ಷಿಣ್ಯವಾಗಿ ಪರವಾನಗಿ ರದ್ದುಗೊಳಿಸಬೇಕು ಎಂದು ಸೂಚಿಸಿದರು.
ಶಾಸಕರಾದ ಆರಗ ಜ್ಞಾನೇಂದ್ರ, ಎಸ್.ಎನ್.ಚನ್ನಬಸಪ್ಪ, ವಿಧಾನ ಪರಿಷತ್ ಸದಸ್ಯ ಡಿ.ಎಸ್.ಅರುಣ್, ಅಲೆಮಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಜಿ.ಪಲ್ಲವಿ, ಜವಳಿ ಅಭಿವೃದ್ಧಿ (ವಿದ್ಯುತ್ ಕೈಮಗ್ಗ) ನಿಗಮದ ಅಧ್ಯಕ್ಷ ಕೆ.ಚೇತನ್ ಗೌಡ, ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಉಪಸ್ಥಿತರಿದ್ದರು.