ಶಿಕಾರಿಪುರದ ಮೈತ್ರಿ ಪ್ರಾಥಮಿಕ ಶಾಲೆ ಮತ್ತು ಕುಮದ್ವತಿ ಪ್ರೌಢಶಾಲೆಯಲ್ಲಿ ಆಯೋಜಿಸಿದ್ದ ವಿಶ್ವ ಪರಿಸರ ದಿನಾಚರಣೆಯಲ್ಲಿ ಬಿ.ವೈ.ಉಮಾದೇವಿ, ವಿಶ್ವನಾಥ್, ಪ್ರಶಾಂತ್ ಇತರರಿದ್ದರು. 
ಶಿವಮೊಗ್ಗ

ಹಾನಿ ತಡೆಗಟ್ಟುವುದು ಮುಖ್ಯ

ಸೋಮಶೇಖರ ಎನ್
ಶಿಕಾರಿಪುರ: ಸ್ವಚ್ಛ ಹಾಗೂ ಸುಂದರ ಪರಿಸರವು ಸಮಾಜದ ಸ್ವಾಸ್ಥೃ ಕಾಪಾಡುತ್ತದೆ. ಪರಿಸರ ಸಂರಕ್ಷಣೆ ನಮ್ಮೆಲ್ಲರ ಕರ್ತವ್ಯ ಎಂದು ಪಿಇಎಸ್ ವಿದ್ಯಾಸಂಸ್ಥೆ ಕಾರ್ಯನಿರ್ವಹಣಾಧಿಕಾರಿ ಬಿ.ವೈ.ಉಮಾದೇವಿ ಹೇಳಿದರು.
ಭವಾನಿಕೇರಿಯ ಮೈತ್ರಿ ಪ್ರಾಥಮಿಕ ಶಾಲೆ ಮತ್ತು ಕುಮದ್ವತಿ ಪ್ರೌಢಶಾಲೆಯಲ್ಲಿ ಆಯೋಜಿಸಿದ್ದ ವಿಶ್ವ ಪರಿಸರ ದಿನಾಚರಣೆ ಉದ್ಘಾಟಿಸಿ ಮಾತನಾಡಿ, ಮನೆಗೊಂದು ಮರ ಊರಿಗೊಂದು ವನ ಇರಬೇಕು. ಅಭಿವೃದ್ಧಿ ಹೆಸರಲ್ಲಿ ದಿನೇದಿನೆ ಸಂಪದ್ಭರಿತ ಅರಣ್ಯ ನಾಶವಾಗುತ್ತಿದೆ ಎಂದು ತಿಳಿಸಿದರು.
ಭೂಮಿ ಮೇಲೆ ಜೀವವಿರುವ ಪ್ರತಿಯೊಂದು ಜೀವರಾಶಿಗೆ ಆಹಾರಕ್ಕಿಂತ ಮೊದಲು ಗಾಳಿ ಅತ್ಯಗತ್ಯ. ಪರಿಸರಕ್ಕೆ ಆಗುವ ಹಾನಿ ತಡೆಗಟ್ಟುವುದು ಮತ್ತು ಭೂಮಿ ರಕ್ಷಿಸುವುದು ಪ್ರಮುಖ ಗುರಿಯಾಗಬೇಕು ಎಂದರು.
ಪಿ.ವಿಶ್ವನಾಥ ಮಾತನಾಡಿ, ಪರಿಸರದ ಮೇಲೆ ಮಾನವ ಚಟುವಟಿಕೆಗಳ ಹಸ್ತಕ್ಷೇಪ ಕಡಿಮೆ ಮಾಡಬೇಕು. ಜಾಗತಿಕ ತಾಪಮಾನ ಏರಿಕೆ ತಡೆಗಟ್ಟುವುದು ಮತ್ತು ನಮ್ಮ ಪರಿಸರವನ್ನು ರಕ್ಷಿಸುವುದು ನಮ್ಮೆಲ್ಲರ ಕರ್ತವ್ಯ ಎಂದು ತಿಳಿಸಿದರು.
ಮುಖ್ಯಶಿಕ್ಷಕ ಪ್ರಶಾಂತ್ ಕುಬಸದ, ವಿಜ್ಞಾನ ಶಿಕ್ಷಕಿ ವಿದ್ಯಾ ಕೋರಿಶೆಟ್ಟರ್, ಶಿಕ್ಷಕರು, ಕುಮದ್ವತಿ ಶಿಕ್ಷಣ ಮಹಾವಿದ್ಯಾಲಯದ ಪ್ರಶಿಕ್ಷಣಾರ್ಥಿಗಳು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.