ಭದ್ರಾವತಿ ತಾಲೂಕಿನ ದಾಸರಹಳ್ಳಿ ಗ್ರಾಪಂ ಸಭಾಂಗಣದಲ್ಲಿ ಆಯೋಜಿಸಿದ್ದ ಗರ್ಭಿಣಿಯರಿಗೆ ಸೀಮಂತ ಕಾರ್ಯಕ್ರಮವನ್ನು ಟಿಎಚ್‌ಒ ಎಂ.ವಿ.ಅಶೋಕ್ ಉದ್ಘಾಟಿಸಿದರು. ಸುಶೀಲಾಬಾಯಿ, ಸುಷ್ಮಾ, ಲೋಕೇಶ್ ಇತರರಿದ್ದರು. 
ಶಿವಮೊಗ್ಗ

ಪೌಷ್ಟಿಕ ಆಹಾರ ಸೇವನೆಗೆ ಆದ್ಯತೆ ಕೊಡಿ | Womens Day

ಭದ್ರಾವತಿ: ಹೆಣ್ಣು ಮಕ್ಕಳು ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿವಹಿಸಬೇಕು. ಅದರಲ್ಲೂ ಗರ್ಭಿಣಿ ಮತ್ತು ಬಾಣಂತಿಯರು ವಿಶೇಷ ಆರೈಕೆ, ಪೌಷ್ಟಿಕ ಆಹಾರಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ತಾಲೂಕು ಆರೋಗ್ಯಾಧಿಕಾರಿ ಎಂ.ವಿ.ಅಶೋಕ್ ಹೇಳಿದರು.
ದಾಸರಹಳ್ಳಿ ಗ್ರಾಪಂ ಸಭಾಂಗಣದಲ್ಲಿ ನಾಗತಿಬೆಳಗಲು ಆಯುಷ್ಮಾನ್ ಆರೋಗ್ಯ ಕೇಂದ್ರದಿಂದ ಆಯೋಜಿಸಿದ್ದ ವಿಶ್ವ ಮಹಿಳಾ ದಿನಾಚರಣೆ ಹಾಗೂ ಸೀಮಂತ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಮುಖ್ಯವಾಗಿ ಮಾನಸಿಕ ಆರೋಗ್ಯದ ಬಗ್ಗೆ ಹೆಚ್ಚಿನ ನಿಗಾ ವಹಿಸಬೇಕು ಎಂದರು.
ತಾಲೂಕು ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಸುಶೀಲಾಬಾಯಿ ಮಾತನಾಡಿ, ಹೆಣ್ಣು ಮಕ್ಕಳಿಗೆ ಪ್ರಕೃತಿದತ್ತವಾಗಿ ಸಹನೆ, ಸಹಿಷ್ಣುತೆ, ಪ್ರೀತಿ, ವಾತ್ಸಲ್ಯದ ಗುಣಗಳು ಬಂದಿರುತ್ತವೆ. ಅದಕ್ಕಾಗಿಯೇ ಹೆಣ್ಣು ಸಂಸಾರದ ಕಣ್ಣು ಎಂದು ಕರೆಯಲಾಗುತ್ತಿದೆ. ಹುಟ್ಟುವ ಮಗು ಗಂಡು ಅಥವಾ ಹೆಣ್ಣೆಂಬ ಭೇದವಿಲ್ಲದೆ ಬೆಳೆಸಬೇಕು ಎಂದು ಸಲಹೆ ನೀಡಿದರು.
ಇತ್ತೀಚಿನ ದಿನಗಳಲ್ಲಿ ಪೋಕ್ಸೋ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದೆ. ಮಾದಕ ವಸ್ತುಗಳ ಸೇವನೆ, ಮೊಬೈಲು ಗೀಳು ಮಕ್ಕಳ ಮಾನಸಿಕ ಬೆಳವಣಿಗೆ ಮೇಲೆ ದುಷ್ಪರಿಣಾಮ ಬೀರಿ ಅವರ ಭವಿಷ್ಯವನ್ನು ಹಾಳು ಮಾಡುತ್ತಿವೆ. ಈ ಬಗ್ಗೆ ಪಾಲಕರು ಎಚ್ಚರ ವಹಿಸಬೇಕು ಎಂದು ತಿಳಿಸಿದರು.
ಸಿಎಚ್‌ಒ ಸುಷ್ಮಾ, ಆರೋಗ್ಯ ನಿರೀಕ್ಷಣಾಧಿಕಾರಿ ಲೋಕೇಶ್, ಸುರಕ್ಷಾ ಅಧಿಕಾರಿ ಕಮಲಮ್ಮ ಪೂಜಾರ್, ಗ್ರಾಪಂ ಕಾರ್ಯದರ್ಶಿಗಳು, ಅಂಗನವಾಡಿ ಕಾರ್ಯಕರ್ತೆಯರು ಇದ್ದರು.