ಶಿವಮೊಗ್ಗ: ಸರ್ಕಾರಿ ಶಾಲೆಗಳಲ್ಲಿ ಮುಖ್ಯವಾಗಿ ಗಡಿಭಾಗ(Border)ದ ಕನ್ನಡ ಶಾಲೆಗಳನ್ನು ಉಳಿಸಬೇಕಿದೆ. ಆ ನಿಟ್ಟಿನಲ್ಲಿ ಸರ್ಕಾರದಿಂದ ಎಲ್ಲ ರೀತಿಯ ಕ್ರಮಗಳನ್ನೂ ಕೈಗೊಳ್ಳಲಾಗುತ್ತಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಸ್ಪಷ್ಟಪಡಿಸಿದರು.
ಶಿಕ್ಷಣ ಇಲಾಖೆಯ ಕಾರ್ಯಕ್ರಮಗಳ ವ್ಯವಸ್ಥಿತ ಅನುಷ್ಠಾನಕ್ಕೆ ಯಾವುದೇ ಹಣಕಾಸಿನ ಅಡಚಣೆ ಇಲ್ಲ. ಕೆಪಿಎಸ್‌ಗಳಲ್ಲಿ ಎಲ್‌ಕೆಜಿ(Lkg)ಯಿಂದ ಪಿಯುಸಿವರೆಗೆ ಉಚಿತ ಶಿಕ್ಷಣ(Free education) ನೀಡಲಾಗುವುದು ಎಂದು ಭಾನುವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ವಿಶೇಷವಾಗಿ ಒಂದನೇ ತರಗತಿಯಿಂದ ಕಂಪ್ಯೂಟರ್(Computer) ಕಲಿಕೆ, 5ನೇ ತರಗತಿವರೆಗೆ ದ್ವಿಭಾಷೆ ಮತ್ತು ಆರನೇ ತರಗತಿ ಮೇಲ್ಪಟ್ಟು ಭಾಷೆ ಆಯ್ಕೆಗೆ ಅವಕಾಶ ಕಲ್ಪಿಸಲಾಗುವುದು. ಮುಂದಿನ ವರ್ಷದಿಂದ ಪಿಯುಸಿವರೆಗೆ ಪಠ್ಯಪುಸ್ತಕ, ಬಿಸಿಯೂಟ ಕೊಡಲಾಗುವುದು. ಈ ಮೂಲಕ ಪಿಯುಸಿವರೆಗೆ ಸಮಾನಾಂತರ ಶಿಕ್ಷಣಕ್ಕೆ ಒತ್ತು ನೀಡಲಾಗುವುದು ಎಂದು ಹೇಳಿದರು.