ಬಿಜೆಪಿ ಒಬಿಸಿ ಮೋರ್ಚಾ ರಾಜ್ಯಾಧ್ಯಕ್ಷ ರಘು ಕೌಟಿಲ್ಯ. 
ಶಿವಮೊಗ್ಗ

ಹಿಂದುಳಿದ ವರ್ಗಗಳಿಗೆ ಅನುದಾನ ನೀಡಲಿ backwrd comunity

ಶಿವಮೊಗ್ಗ: ರಾಜ್ಯ ಸರ್ಕಾರಕ್ಕೆ ಹಿಂದುಳಿದ ವರ್ಗಗಳ ಅಭಿವೃದ್ಧಿ ಬಗ್ಗೆ ಸ್ವಲ್ಪವಾದರೂ ಕಾಳಜಿಯಿದ್ದರೆ ಮುಂದಿನ ವಿಧಾನ ಮಂಡಲದ ಅಧಿವೇಶನದೊಳಗೆ ಎರಡು ಸಾವಿರ ಕೋಟಿ ರೂ. ಅನುದಾನ ಬಿಡುಗಡೆ ಮಾಡಲಿ ಎಂದು ಬಿಜೆಪಿ ಹಿಂದುಳಿದ ಮೋರ್ಚಾ ರಾಜ್ಯಾಧ್ಯಕ್ಷ, ಎಂಎಲ್‌ಸಿ ರಘು ಕೌಟಿಲ್ಯ ಹೇಳಿದರು.

ಶಿವಮೊಗ್ಗ: ರಾಜ್ಯ ಸರ್ಕಾರಕ್ಕೆ ಹಿಂದುಳಿದ ವರ್ಗಗಳ ಅಭಿವೃದ್ಧಿ ಬಗ್ಗೆ ಸ್ವಲ್ಪವಾದರೂ ಕಾಳಜಿಯಿದ್ದರೆ ಮುಂದಿನ ವಿಧಾನ ಮಂಡಲದ ಅಧಿವೇಶನದೊಳಗೆ ಎರಡು ಸಾವಿರ ಕೋಟಿ ರೂ. ಅನುದಾನ ಬಿಡುಗಡೆ ಮಾಡಲಿ ಎಂದು ಬಿಜೆಪಿ ಹಿಂದುಳಿದ ಮೋರ್ಚಾ ರಾಜ್ಯಾಧ್ಯಕ್ಷ, ಎಂಎಲ್‌ಸಿ ರಘು ಕೌಟಿಲ್ಯ ಹೇಳಿದರು.

ಅಹಿಂದ ಹೆಸರಿನಲ್ಲಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಅಲ್ಪಸಂಖ್ಯಾತರೊಂದಿಗೆ ಅಂತರವಿರಿಸಿಕೊಂಡು, ಹಿಂದುಳಿದವರನ್ನು ಹಿಂದೆ ಬಿಟ್ಟು, ದಲಿತರನ್ನು ಹತ್ತಿಕ್ಕುತ್ತಿದೆ. ರಾಜ್ಯದ ಒಟ್ಟು ಜನಸಂಖ್ಯೆಯ ಅರ್ಧಕ್ಕೂ ಹೆಚ್ಚು ಪಾಲು ಹೊಂದಿರುವ ಹಿಂದುಳಿದ ವರ್ಗಗಳ ಅಭಿವೃದ್ಧಿಗೆ ಯಾವುದೇ ಕಾರ್ಯಕ್ರಮ ರೂಪಿಸಿಲ್ಲ ಎಂದು ಗುರುವಾರ ಸುದ್ದಿಗೋಷ್ಠಿಯಲ್ಲಿ ದೂರಿದರು.

ಈ ಸರ್ಕಾರ ಅಭಿವೃದ್ಧಿಶೂನ್ಯವಾಗಿದೆ. ಭ್ರಷ್ಟಾಚಾರ ಹೆಚ್ಚಾಗಿದೆ. ರಾಜ್ಯದಲ್ಲಿ ತೀವ್ರ ಬರಗಾಲವಿದೆ. ಬೆಳೆಗೆ ಸರಿಯಾದ ಬೆಲೆ ಸಿಗದೆ ರೈತರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. ಆದರೂ ಸರ್ಕಾರ ರೈತರ ನೆರವಿಗೆ ಬರುತ್ತಿಲ್ಲ ಎಂದು ಟೀಕಿಸಿದರು.

ದೇವರಾಜ ಅರಸು ಅಭಿವೃದ್ಧಿ ನಿಗಮದ ವ್ಯಾಪ್ತಿಯಲ್ಲಿ 200 ಜಾತಿಗಳಿವೆ. ಕೇವಲ 250 ಕೋಟಿ ರೂ. ಅನುದಾನ ಮೀಸಲಿರಿಸಲಾಗಿದೆ. ಇನ್ನುಳಿದ ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮಗಳಿಗೆ ಬಿಡಿಗಾಸು ನೀಡಲಾಗಿದೆ. ಕಾಂತರಾಜ ಅಯೋಗದ ಜಾತಿ ಜನಗಣತಿ ವರದಿಯನ್ನು ರಾಹುಲ್ ಗಾಂಧಿ ಸೂಚನೆ ಮೇರೆಗೆ ಕಸದ ಬುಟ್ಟಿಗೆ ಹಾಕಲಾಗಿದೆ. 450 ಕೋಟಿ.ರೂ. ವೆಚ್ಚ ಮಾಡಿ ಸಿದ್ಧಪಡಿಸಿದ ಮಧುಸೂದನ ನಾಯ್ಕ ಆಯೋಗದ ವರದಿಯನ್ನೂ ಜಾರಿಗೊಳಿಸಲಿಲ್ಲ ಎಂದು ಆಕ್ಷೇಪ ವ್ಯಕ್ತಪಡಿಸಿದರು.

ಒಬಿಸಿ ಮೋರ್ಚಾ ರಾಜ್ಯ ಉಪಾಧ್ಯಕ್ಷ ಕುಬೇರಪ್ಪ, ಜಿಲ್ಲಾಧ್ಯಕ್ಷ ಸುಧಾಕರ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಲೋಕೇಶ್, ಪ್ರಮುಖರಾದ ಪ್ರಭಾಕರ್, ರಂಗನಾಥ್, ಪ್ರದೀಪ್ ಹೊನ್ನಪ್ಪ, ಮಂಜುನಾಥ್, ಚಂದ್ರಶೇಖರ್ ಸುದ್ದಿಗೋಷ್ಠಿಯಲ್ಲಿದ್ದರು.