ಶಿವಮೊಗ್ಗದ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ 
ಶಿವಮೊಗ್ಗ

ಲೈಂಗಿಕ ದೌರ್ಜನ್ಯ ಎಸಗಿದ್ದ ಯುವಕನಿಗೆ ಶಿಕ್ಷೆ Sexual assault

ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ ಯುವಕನಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ ಮತ್ತು 1.10 ಲಕ್ಷ ರೂ. ದಂಡ ವಿಧಿಸಿ ಶಿವಮೊಗ್ಗದ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ (ಎಫ್‌ಟಿಎಸ್‌ಸಿ-1) ತೀರ್ಪು ನೀಡಿದೆ.

ಶಿವಮೊಗ್ಗ: ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ ಯುವಕನಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ ಮತ್ತು 1.10 ಲಕ್ಷ ರೂ. ದಂಡ ವಿಧಿಸಿ ಶಿವಮೊಗ್ಗದ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ (ಎಫ್‌ಟಿಎಸ್‌ಸಿ-1) ತೀರ್ಪು ನೀಡಿದೆ.

ತಾಲೂಕಿನ ನಿವಾಸಿ 22 ವರ್ಷದ ಯುವಕ ಜೈಲು ಶಿಕ್ಷೆಗೆ ಗುರಿಯಾದವ. ಆತ 16 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ. ಈ ಸಂಬಂಧ ತುಂಗಾನಗರ ಪೊಲೀಸ್ ಠಾಣೆಯಲ್ಲಿ ಪೋಕ್ಸೊ ಪ್ರಕರಣ ದಾಖಲಾಗಿತ್ತು. ಅಂದಿನ ಇನ್‌ಸ್ಪೆಕ್ಟರ್ ಬಿ.ಮಂಜುನಾಥ್ ಪ್ರಕರಣದ ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪಣ ಪಟ್ಟಿ ಸಲ್ಲಿಸಿದ್ದರು.

ಪ್ರಕರಣದ ತನಿಖೆ ನಡೆಸಿದ ನ್ಯಾಯಾಧೀಶ ನಿಂಗನಗೌಡ ಭ ಪಾಟೀಲ್ ಅವರು ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಜೀವಾವಧಿ ಶಿಕ್ಷೆ, ದಂಡ ಹಾಗೂ ನೊಂದ ಬಾಲಕಿಗೆ 5 ಲಕ್ಷ ರೂ. ಪರಿಹಾರ ನೀಡುವಂತೆ ಆದೇಶಿಸಿದ್ದಾರೆ. ಸರ್ಕಾರಿ ಅಭಿಯೋಜಕ ಶ್ರೀಧರ್ ಸರ್ಕಾರದ ಪರವಾಗಿ ವಾದ ಮಂಡಿಸಿದ್ದರು.