ಭದ್ರಾವತಿ ಬಸವೇಶ್ವರ ಶಾಲೆಯಲ್ಲಿ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ತಾಯಿನುಡಿ ಕವನ ಸಂಕಲನವನ್ನು ಕಸಾಪ ಜಿಲ್ಲಾಧ್ಯಕ್ಷ ಡಿ.ಮಂಜುನಾಥ್ ಬಿಡುಗಡೆಗೊಳಿಸಿದರು. ಮಂಜಾನಾಯ್ಕ, ಎಚ್.ಎಸ್.ರಘು, ಕೆ.ಸಿ.ಸುರೇಶ್ ಇತರರಿದ್ದರು. 
ಶಿವಮೊಗ್ಗ

ಕನ್ನಡ ಸಾಹಿತ್ಯದ ಅರಿವು ಮೂಡಿಸಿ

ಭದ್ರಾವತಿ: ಕನ್ನಡ ಭಾಷೆಯನ್ನು ಸುಲಲಿತವಾಗಿ ಮಾತನಾಡುವ ಮಕ್ಕಳು ಕನ್ನಡ ವಿಷಯದ ಪರೀಕ್ಷೆಗಳಲ್ಲಿ ಫೇಲಾಗುತ್ತಿರುವುದು ನೋವಿನ ಸಂಗತಿ ಎಂದು ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷ ಡಿ.ಮಂಜುನಾಥ್ ಹೇಳಿದರು.
ಜನ್ನಾಪುರದ ಶ್ರೀ ಬಸವೇಶ್ವರ ಶಾಲಾ ಸಭಾಂಗಣದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಶಿಕ್ಷಕ ಮಂಜಾನಾಯ್ಕ ಬಿ.ಆರ್.ಬಳೂರು ರಚಿಸಿರುವ ತಾಯಿ ನುಡಿ ಕವನ ಸಂಕಲನವನ್ನು ಬಿಡುಗಡೆಗೊಳಿಸಿ ಮಾತನಾಡಿ, ಕನ್ನಡ ಭಾಷೆ ಮತ್ತು ಸಾಹಿತ್ಯದ ಬಗ್ಗೆ ಮಕ್ಕಳಿಗೆ ಅರಿವು ಮೂಡಿಸಬೇಕು ಎಂದು ತಿಳಿಸಿದರು.
ಶಿಕಾರಿಪುರ ತಾಲೂಕು ಕಸಾಪ ಅಧ್ಯಕ್ಷ ಎಚ್.ಎಸ್.ರಘು, ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಗಂಗಾನಾಯ್ಕ, ಕ್ಷೇತ್ರ ಶಿಕ್ಷಣಾಧಿಕಾರಿ ಕೆ.ಸಿ.ಸುರೇಶ್, ಎಚ್.ಬಿ.ಸಿದ್ದೇಶ್, ಕೋಗಲೂರು ತಿಪ್ಪೇಸ್ವಾಮಿ, ಮಂಜುನಾಥ್, ಎಲ್.ಬಿ.ಶೇಖರಪ್ಪ, ಎಚ್.ಆರ್.ಲತಾಕುಮಾರಿ, ಜಿ.ಮೂರ್ತಿ, ಎನ್.ಪ್ರಕಾಶ್ ಇತರರಿದ್ದರು.