ಸೊರಬ ಸಮೀಪ ಹಂಚಿ ಗ್ರಾಮದ ಬಸ್ ನಿಲ್ದಾಣದಿಂದ ಕುಣಿತೆಪ್ಪ ಹೋಗುವ ರಸ್ತೆ ನಿರ್ಮಾಣಕ್ಕೆ ಸಚಿವ ಮಧು ಬಂಗಾರಪ್ಪ ಗುದ್ದಲಿಪೂಜೆ ನೇರವೇರಿಸಿದರು. ಕೆ.ಪುರಂದರ, ಶಶಿಧರ್, ಆರ್.ಪುಷ್ಪಾ ಇತರರಿದ್ದರು. 
ಶಿವಮೊಗ್ಗ

ಕ್ಷೇತ್ರದ ಜನರ ಸಮಸ್ಯೆ ಪರಿಹರಿಸಲು ಸ್ಪಂದಿಸಿ

ಸೊರಬ: ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಕ್ರಮ ಕೈಗೊಂಡಿದ್ದು, ರಸ್ತೆ ನಿರ್ಮಾಣಕ್ಕೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ ಎಂದು ಶಿಕ್ಷಣ ಸಚಿವ ( MINISTER ) ಮಧು ಬಂಗಾರಪ್ಪ ಹೇಳಿದರು.
ತಾಲೂಕಿನ ಹಂಚಿ ಗ್ರಾಮದ ಬಸ್ ನಿಲ್ದಾಣದಿಂದ ಕುಣಿತೆಪ್ಪ ಹೋಗುವ ( Road )ರಸ್ತೆಗೆ 50 ಲಕ್ಷ ರೂ. ವೆಚ್ಚದ ಸಿಸಿ ರಸ್ತೆ ನಿರ್ಮಾಣಕ್ಕೆ ಗುದ್ದಲಿಪೂಜೆ ನೆರವೇರಿಸಿ ಮಾತನಾಡಿ, ಸರ್ಕಾರ ಜನಪರ ಯೋಜನೆಗಳನ್ನು ಜಾರಿಗೆ ತಂದಿದ್ದು, ಸಾರ್ವಜನಿಕರು ಸದುಪಯೋಗ ಪಡೆದುಕೊಳ್ಳಬೇಕು ಎಂದು ತಿಳಿಸಿದರು.
ಸಾರ್ವಜನಿಕರ ಸಮಸ್ಯೆ ಬಗ್ಗೆ ಅಧಿಕಾರಿಗಳು ಸ್ಪಂದಿಸುವ ಮೂಲಕ ಸಮಸ್ಯೆಗೆ ಪರಿಹಾರ ನೀಡಬೇಕು. ತಾಲೂಕಿನ ಬಗರ್‌ಹುಕುಂ ರೈತರಿಗೆ ಹಕ್ಕುಪತ್ರ ವಿತರಿಸುವ ಪ್ರಕ್ರಿಯೆಯನ್ನು ಕಾನೂನಾತ್ಮಕವಾಗಿ ನಡೆಸಲು ಸರ್ಕಾರ ಬದ್ಧವಾಗಿದೆ. ರೈತರಲ್ಲಿ ಗೊಂದಲ ಬೇಡ ಎಂದರು.
ಮೂಗೂರು ಏತ ನೀರಾವರಿ ಯೋಜನೆಯಿಂದ ಕೆರೆಗಳಿಗೆ ಸರಿಯಾಗಿ ನೀರು ತುಂಬುತ್ತಿಲ್ಲ ಎಂದು ರೈತರು ಗಮನಕ್ಕೆ ತಂದಿದ್ದು, ಅಧಿಕಾರಿಗಳು ತಾಲೂಕಿನಲ್ಲಿ ಸಭೆ ಕರೆದು ಸಮಸ್ಯೆ ಬಗ್ಗೆ ಚರ್ಚೆ ನಡೆಸಬೇಕು ಎಂದು ಸೂಚಿಸಿದರು.
ಡಿಸಿಸಿ ಬ್ಯಾಂಕ್ ನಿರ್ದೇಶಕ ಕೆ.ಪಿ.ರುದ್ರೇಗೌಡ, ( SORABA ) ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸದಾನಂದ ಗೌಡ, ಮಂಜುನಾಥ, ನಾಗಪ್ಪ, ಮಂಜುನಾಥ್, ಮಲ್ಲಿಕಣ್ಣ, ಮಂಜಪ್ಪ, ಚಂದ್ರಯ್ಯ, ಶಿವಕುಮಾರ್, ಪರಮೇಶ್, ಜೆ.ಜೆ.ನಾಯ್ಕ, ಶಿವಪ್ಪ, ಶಿವಲಿಂಗೇಗೌಡ, ತಹಸೀಲ್ದಾರ್ ಕೆ.ಪುರಂದರ, ಇಒ ಶಶಿಧರ್, ಆರ್.ಪುಷ್ಪಾ ಇತರರಿದ್ದರು.