ಶಿಕಾರಿಪುರದಲ್ಲಿ ಬಿಎಸ್‌ವೈ ಅಭಿಮಾನೋತ್ಸವ ಅಂಗವಾಗಿ ವಾಹನಗಳಿಗೆ ಸ್ಟಿಕರ್ ಅಂಟಿಸಲಾಯಿತು. ಕೆ.ಎಸ್.ಗುರುಮೂರ್ತಿ, ಡಿ.ಎಲ್.ಬಸವರಾಜ್, ಚನ್ನವೀರಪ್ಪ, ಬೆಣ್ಣೆ ಪ್ರವೀಣ, ವೀರನಗೌಡ, ಸುರೇಶ್ ಇತರರಿದ್ದರು.
ಶಿಕಾರಿಪುರ: ಚಿತ್ರದುರ್ಗದಲ್ಲಿ ಆಯೋಜಿಸಿರುವ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅಭಿಮಾನೋತ್ಸವ ಸಮಾರಂಭದಲ್ಲಿ ಭಾಗವಹಿಸಲು ಪಟ್ಟಣದಲ್ಲಿ ಅಭಿಮಾನಿಗಳು ಹಾಗೂ ಬಿಜೆಪಿ ಕಾರ್ಯಕರ್ತರು ಆಟೋ ಮತ್ತಿತರ ವಾಹನಗಳಿಗೆ ಸ್ಟಿಕರ್ ಅಂಟಿಸಿದರು.
ಪಟ್ಟಣದ ಬಸ್ ನಿಲ್ದಾಣ, ಸಂಗೊಳ್ಳಿ ರಾಯಣ್ಣ ಆಟೋ ನಿಲ್ದಾಣ, ಪ್ರಮುಖ ವೃತ್ತಗಳು ಮತ್ತು ರಸ್ತೆಗಳಲ್ಲಿ ಯಡಿಯೂರಪ್ಪ ಅಭಿಮಾನಿಗಳ ವಾಹನಗಳಿಗೆ ಸ್ಟಿಕರ್ ಅಂಟಿಸಿದರು. ವೃತ್ತಗಳಲ್ಲಿ ಜಮಾಯಿಸಿದ ಕಾರ್ಯಕರ್ತರು, ಬಿಎಸ್‌ವೈ ಪರ ಘೋಷಣೆ ಕೂಗಿದರು.
ಎಂಎಡಿಬಿ ಮಾಜಿ ಅಧ್ಯಕ್ಷ ಕೆ.ಎಸ್.ಗುರುಮೂರ್ತಿ ಮಾತನಾಡಿ, ಶಿಕಾರಿಪುರ ಪಟ್ಟಣ ಮಾತ್ರವಲ್ಲದೆ ತಾಲೂಕಿನ ಹಳ್ಳಿ ಹಳ್ಳಿಗಳಿಂದಲೂ ಜನರು ಸ್ವಯಂಪ್ರೇರಿತರಾಗಿ ವಾಹನಗಳಲ್ಲಿ ಚಿತ್ರದುರ್ಗದತ್ತ ಮುಖ ಮಾಡಿದ್ದಾರೆ. ಯುವ ಕಾರ್ಯಕರ್ತರು ಬೈಕ್ ರ‌್ಯಾಲಿಗಳ ಮೂಲಕ ಸಾಥ್ ನೀಡುತ್ತಿದ್ದಾರೆ. ನಿರೀಕ್ಷೆ ಮೀರಿ ತಾಲೂಕು ಹಾಗೂ ಜಿಲ್ಲೆಯಿಂದ ಪಕ್ಷದ ಕಾರ್ಯಕರ್ತರು, ಅಭಿಮಾನಿಗಳು ಆಗಮಿಸಲಿದ್ದಾರೆ ಎಂದರು.
ಡಿಸಿಸಿ ಬ್ಯಾಂಕ್ ನಿರ್ದೇಶಕ ಡಿ.ಎಲ್.ಬಸವರಾಜ್, ಮಾಜಿ ಅಧ್ಯಕ್ಷ ಚನ್ನವೀರಪ್ಪ, ಬಿಜೆಪಿ ಜಿಲ್ಲಾ ಯುವ ಮೋರ್ಚಾ ಉಪಾಧ್ಯಕ್ಷ ಬೆಣ್ಣೆ ಪ್ರವೀಣ, ತಾಲೂಕು ಅಧ್ಯಕ್ಷ ವೀರನಗೌಡ, ಸುರೇಶ್ ಹೂವಿನಮಂಡಿ, ವಸಂತಗೌಡ, ಅಣ್ಣಪ್ಪ ಗೌಡ ಇತರರಿದ್ದರು.