ಸೊರಬ ತಾಲೂಕಿನ ಜಡೆ ಗ್ರಾಮದಲ್ಲಿ ಸೂರಣಗಿ ಸಂಪರ್ಕ ಕಲ್ಪಿಸುವ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಸಚಿವ ಎಸ್. ಮಧು ಬಂಗಾರಪ್ಪ ಶಂಕುಸ್ಥಾಪನೆ ನೆರವೇರಿಸಿದರು. ಜಯಶೀಲ ಗೌಡ, ಕೆ.ಪಿ.ರುದ್ರಗೌಡ ಇತರರಿದ್ದರು.
- ರಸ್ತೆ ಕಾಮಗಾರಿಗಳಿಗೆ ಮೊದಲ ಆದ್ಯತೆ
- ಸೂರಣಗಿ ಗ್ರಾಮಕ್ಕೆ ಸಾಗುವ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಂಕುಸ್ಥಾಪನೆ
ಸೊರಬ: ತಾವು ಹಿಂದಿನ ಬಾರಿ ಶಾಸಕರಾಗಿದ್ದ ಅವಧಿಯಲ್ಲಿ ನಿರ್ಮಿಸಿದ ಗ್ರಾಮೀಣ ರಸ್ತೆಗಳು ಇಂದಿಗೂ ಉತ್ತಮವಾಗಿವೆ. ಅಧಿಕಾರಿಗಳು ಈ ಬಾರಿಯೂ ಗುಣಮಟ್ಟ ಕಾಯ್ದುಕೊಳ್ಳಬೇಕು ಎಂದು ಸಚಿವ ಎಸ್. ಮಧು ಬಂಗಾರಪ್ಪ ಹೇಳಿದರು.
ತಾಲೂಕಿನ ಜಡೆ ಗ್ರಾಮದಲ್ಲಿ ಸೋಮವಾರ ಸೂರಣಗಿ ಗ್ರಾಮಕ್ಕೆ ಸಾಗುವ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದರು. ಸೊರಬ ೇತ್ರ ಮಾತ್ರವಲ್ಲದೆ ಜಿಲ್ಲೆಯಲ್ಲಿ ಎಲ್ಲಾ ೇತ್ರಗಳ ಬಗ್ಗೆಯೂ ಗಮನ ವಹಿಸಲಾಗುತ್ತಿದೆ. ಬಡ ಮಕ್ಕಳಿಗೆ ಉತ್ತಮ ಶಿಕ್ಷಣ ದೊರಕಿಸಿಕೊಡುವ ಉದ್ದೇಶದಿಂದ ರಾಜ್ಯದಲ್ಲಿ ಕರ್ನಾಟಕ ಪಬ್ಲಿಕ್ ಶಾಲೆಗಳಿಗೆ ಜೂ.1ರಂದು ಚಾಲನೆ ನೀಡಲಾಗುತ್ತಿದೆ ಎಂದು ತಿಳಿಸಿದರು. ಜಿಪಂ ಮಾಜಿ ಸದಸ್ಯ ಶಿವಲಿಂಗೇಗೌಡ, ಗ್ರಾಪಂ ಮಾಜಿ ಅಧ್ಯ ಕೇಶವ ರಾಯ್ಕರ್, ಆರ್.ಟಿ.ಮಂಜುನಾಥ್, ರಾಜು, ರಾಮಪ್ಪ, ಪ್ರಕಾಶ್ ಇತರರಿದ್ದರು.