ಶಿವಮೊಗ್ಗದ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ 
ಶಿವಮೊಗ್ಗ

ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ, ಯುವಕನಿಗೆ 20 ವರ್ಷ ಶಿಕ್ಷೆ Sexual assault

ಶಿವಮೊಗ್ಗ: ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ಯುವಕನಿಗೆ ಶಿವಮೊಗ್ಗದ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ(ಎಫ್‌ಟಿಎಸ್‌ಸಿ-1) 20 ವರ್ಷ ಕಠಿಣ ಕಾರಾಗೃಹ ಶಿಕ್ಷೆ ಹಾಗೂ 1.01 ಲಕ್ಷ ರೂ. ದಂಡ ವಿಧಿಸಿದೆ. ನೊಂದ ಬಾಲಕಿಗೆ 4 ಲಕ್ಷ ರೂ. ಪರಿಹಾರ ನೀಡುವಂತೆ ಆದೇಶಿಸಿದೆ.

ವಿನೋಬನಗರ ಪೊಲೀಸ್ ಠಾಣೆಯಲ್ಲಿ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೋಕ್ಸೊ ಪ್ರಕರಣ ದಾಖಲಾಗಿತ್ತು. 23 ವರ್ಷದ ಯುವಕ 13 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಹಿನ್ನೆಲೆಯಲ್ಲಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದರು.

ಪ್ರಕರಣದ ತನಿಖೆ ನಡೆಸಿದ ವಿನೋಬನಗರ ಠಾಣೆಯ ಪೊಲೀಸ್ ಇನ್ಸ್‌ಪೆಕ್ಟರ್ ಚಂದ್ರಕಲಾ ಅವರು ತನಿಖೆ ಪೂರ್ಣಗೊಳಿಸಿ ಆರೋಪಿ ವಿರುದ್ಧ ದೋಷಾರೋಪಣ ಪಟ್ಟಿ ಸಲ್ಲಿಸಿದ್ದರು. ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಧೀಶ ನಿಂಗನಗೌಡ ಭ. ಪಾಟೀಲ್ ಶಿಕ್ಷೆ ಮತ್ತು ದಂಡ ವಿಧಿಸಿದ್ದಾರೆ. ಸರ್ಕಾರಿ ಅಭಿಯೋಜಕ ಶ್ರೀಧರ್ ಸರ್ಕಾರದ ಪರವಾಗಿ ವಾದ ಮಂಡಿಸಿದ್ದರು.