- ಶಿಕ್ಷೆ, ದಂಡ ವಿಧಿಸಿದ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ
- ಶಿವಮೊಗ್ಗ ನಗರದ 20 ವರ್ಷದ ಯುವಕ ಶಿಕ್ಷೆಗೆ ಒಳಗಾದವ
- ಕೋಟೆ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪೋಕ್ಸೋ ಪ್ರಕರಣ
ಶಿವಮೊಗ್ಗ: ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ(Sexual assault) ನಡೆಸಿದ್ದ ಯುವಕನಿಗೆ ಶಿವಮೊಗ್ಗದ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ (ಎಫ್‌ಟಿಎಸ್‌ಸಿ-1)ವು 5 ವರ್ಷ ಕಠಿಣ ಕಾರಾಗೃಹ ವಾಸ ಮತ್ತು 1.62 ಲಕ್ಷ ರೂ. ದಂಡ ವಿಧಿಸಿದೆ.
ಶಿವಮೊಗ್ಗ ನಗರದ 20 ವರ್ಷದ ಯುವಕ ಶಿಕ್ಷೆಗೆ ಒಳಗಾದವ. 2022ರಲ್ಲಿ ಈತ 17 ವರ್ಷದ ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ್ದ. ಅಲ್ಲದೆ, ಆಕೆ. ಬಳಿ ಇದ್ದ ಬಂಗಾರದ ಸರವನ್ನು ಪಡೆದು ವಂಚಿಸಿದ್ದ. ಈ ಬಗ್ಗೆ ಕೋಟೆ ಪೊಲೀಸ್ ಠಾಣೆ(Kote Police Station)ಯಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿತ್ತು.
ಪ್ರಕರಣದ ಆಗಿನ ತನಿಖಾಧಿಕಾರಿಯಾಗಿದ್ದ ಪಿಎಸ್‌ಐ ಕೃಷ್ಣಾ ನಾಯ್ಕ ತನಿಖೆ ಪೂರೈಸಿ ದೋಷಾರೋಪಣ ಪಟ್ಟಿ ಸಲ್ಲಿಸಿದ್ದರು. ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಧೀಶ ನಿಂಗನಗೌಡ ಭ ಪಾಟೀಲ್(Judge Ningana Gowda B. Patil) ಅವರು ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಯುವಕನಿಗೆ ಕಠಿಣ ಶಿಕ್ಷೆ ಮತ್ತು ದಂಡ ವಿಧಿಸಿದ್ದಾರೆ. ಅಲ್ಲದೆ, ನೊಂದ ಬಾಲಕಿಗೆ 62 ಸಾವಿರ ರೂ. ಪರಿಹಾರ ನೀಡಲು ಆದೇಶಿಸಿದ್ದಾರೆ. ಸರ್ಕಾರಿ ಅಭಿಯೋಜಕ ಶ್ರೀಧರ್ ಅವರು ಸರ್ಕಾರದ ಪರವಾಗಿ ವಾದ ಮಂಡಿಸಿದ್ದರು.