ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ 
ಶಿವಮೊಗ್ಗ

ರಾಜ್ಯ ಸರ್ಕಾರ ಗೋಶಾಲೆಗಳನ್ನು ಹೆಚ್ಚಿಸಲಿ, ಈಶ್ವರಪ್ಪ ಒತ್ತಾಯ Goshala

ಶಿವಮೊಗ್ಗ: ಜನರ ಅಪೇಕ್ಷೆಯಂತೆ ರಾಜ್ಯದಲ್ಲಿ ಹೆಚ್ಚಿನ ಗೋಶಾಲೆಗಳನ್ನು ಆರಂಭಿಸಲು ಸರ್ಕಾರ ಮುಂದಾಗಬೇಕು ಎಂದು ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ಹೇಳಿದರು.

ಶಿವಮೊಗ್ಗ: ಜನರ ಅಪೇಕ್ಷೆಯಂತೆ ರಾಜ್ಯದಲ್ಲಿ ಹೆಚ್ಚಿನ ಗೋಶಾಲೆಗಳನ್ನು ಆರಂಭಿಸಲು ಸರ್ಕಾರ ಮುಂದಾಗಬೇಕು ಎಂದು ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ಹೇಳಿದರು.

ಸಕ್ರೆಬೈಲ್ ಬಳಿ ಗೋಶಾಲೆಗೆ ಸರ್ಕಾರವೇ ಜಾಗ ನೀಡಿತ್ತು. ಆದರೆ ಇದೀಗ ಅರಣ್ಯ ಇಲಾಖೆ ಆ ಜಾಗ ತಮ್ಮದೆಂದು ಹೇಳುತ್ತಿದೆ. ಹಾಗಾಗಿ ಗೋಶಾಲೆಗಳ ನಿರ್ಮಾಣಕ್ಕೆ ರಾಜ್ಯ ಸರ್ಕಾರ ಹೆಚ್ಚಿನ ಆದ್ಯತೆ ನೀಡಬೇಕು ಎಂದು ಶನಿವಾರ ಸುದ್ದಿಗೋಷ್ಠಿಯಲ್ಲಿ ಒತ್ತಾಯಿಸಿದರು.

ನಾನು ಭಾವನೆಯೊಂದಿಗೆ ರಾಜಕಾರಣ ಮಾಡಲ್ಲ, ಬದುಕಿನೊಂದಿಗೆ ರಾಜಕಾರಣ ಮಾಡುತ್ತೇನೆಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅಧಿಕಾರ ಸ್ವೀಕರಿಸುವ ಸಂದರ್ಭದಲ್ಲಿ ಹೇಳಿದ್ದರು. ಗೋಪೂಜೆಯಲ್ಲಿ ಭಾವನೆ ಮತ್ತು ಬದುಕು ಎರಡೂ ಅಡಕವಾಗಿವೆ. ಗೋವನ್ನು ತಾಯಿಯ ರೂಪದಲ್ಲಿ ಪೂಜಿಸುವುದು ನಮ್ಮ ಭಾವನೆ. ಬದುಕಿಗೂ ಗೋಮಾತೆಯೇ ಆಧಾರ. ಭಾವನೆ ಮತ್ತು ಬದುಕಿನ ನಡುವಿನ ಸಂಬಂಧವನ್ನು ಗೋಮಾತೆ ಕಲಿಸುತ್ತಾಳೆ ಎಂದರು.

ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಜನಸಾಮಾನ್ಯರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಇಂತಹ ಸಂದರ್ಭದಲ್ಲಿ ಬೆಲೆ ಏರಿಸುವ ಮೂಲಕ ರಾಜ್ಯ ಸರ್ಕಾರ ಬಡವರ ಹೊಟ್ಟೆಯ ಮೇಲೆ ಹೊಡೆಯುವ ಕೆಲಸ ಮಾಡಿದೆ. ಏರಿಸಿರುವ ಬೆಲೆಯನ್ನು ಇಳಿಸುವ ಬುದ್ಧಿಯನ್ನು ಗೋಮಾತೆ ಸರ್ಕಾರಕ್ಕೆ ನೀಡಲಿ ಎಂದು ಹೇಳಿದರು.