ಡಿಸಿಸಿ ಬ್ಯಾಂಕ್ ಅಧ್ಯಕ್ಷ ಆರ್.ಎಂ.ಮಂಜುನಾಥ ಗೌಡ  
ಶಿವಮೊಗ್ಗ

17ಕ್ಕೆ ಶಿವಮೊಗ್ಗದಲ್ಲಿ ರಾಜ್ಯ ಮಟ್ಟದ ಸಹಕಾರ ಸಪ್ತಾಹ sahakara saptaha

ಶಿವಮೊಗ್ಗ: ರಾಜ್ಯದ ಏಳು ಜಿಲ್ಲೆಗಳಲ್ಲಿ ಈ ಬಾರಿ ಸಹಕಾರ ಸಪ್ತಾಹದ ಅಂಗವಾಗಿ ರಾಜ್ಯ ಮಟ್ಟದ ಕಾರ್ಯಕ್ರಮ ಆಯೋಜಿಸಲಾಗಿದೆ. ಪ್ರತಿ ದಿನ ಒಂದೊಂದು ಜಿಲ್ಲೆಯಲ್ಲಿ ಈ ಕಾರ್ಯಕ್ರಮ ನಡೆಯಲಿದೆ. ಶಿವಮೊಗ್ಗದ ಲಗಾನ್ ಕಲ್ಯಾಣ ಮಂದಿರದಲ್ಲಿ ನ.17ರ ಬೆಳಗ್ಗೆ 10ಕ್ಕೆ ರಾಜ್ಯ ಮಟ್ಟದ ಸಹಕಾರ ಸಪ್ತಾಹ ಏರ್ಪಡಿಸಲಾಗಿದೆ.

ಈ ಕುರಿತು ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಆರ್.ಎಂ.ಮಂಜುನಾಥ ಗೌಡ, ನ.14ರಿಂದ 20ರವರೆಗೆ ಜಿಲ್ಲೆಯ ಎಲ್ಲ ತಾಲೂಕುಗಳಲ್ಲೂ ಒಂದೊಂದು ದಿನ ಜಿಲ್ಲಾ ಮಟ್ಟದ ಸಹಕಾರ ಸಪ್ತಾಹದ ಅಂಗವಾಗಿ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದರು.

17ರಂದು ಲಗಾನ್ ಕಲ್ಯಾಣ ಮಂದಿರದಲ್ಲಿ ಸಹಕಾರ ಸಚಿವ ಲಕ್ಷ್ಮಣ ಸವದಿ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಸಹಕಾರಿ ಧ್ವಜಾರೋಹಣ ನೆರವೇರಿಸಲಿದ್ದಾರೆ. ಅತ್ಯುತ್ತಮ ಸಹಕಾರ ಸಂಘಗಳಿಗೆ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್ ಪುರಸ್ಕಾರ ಪ್ರದಾನ ಮಾಡಲಿದ್ದಾರೆ. ರಾಜ್ಯ ಸಹಕಾರ ಮಹಾಮಂಡಳದ ಅಧ್ಯಕ್ಷ ಜಿ.ಟಿ.ದೇವೇಗೌಡ ಸಹಕಾರ ಪಿತಾಮಹ ಎಸ್.ಎಸ್.ಪಾಟೀಲ್ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸುವರು. ಶಾಸಕ ಎಸ್.ಎನ್.ಚನ್ನಬಸಪ್ಪ ಅಧ್ಯಕ್ಷತೆ ವಹಿಸಲಿದ್ದಾರೆ. ಸಚಿವರಾದ ಕೆ.ಎಸ್.ಬಸವಂತಪ್ಪ, ಟಿ.ರಘುಮೂರ್ತಿ, ಜಿಲ್ಲೆಯ ಎಲ್ಲ ಶಾಸಕರು, ವಿಧಾನ ಪರಿಷತ್ ಸದಸ್ಯರು, ನಿಗಮ-ಮಂಡಳಿಗಳ ಅಧ್ಯಕ್ಷರು, ಸದಸ್ಯರು, ನಿರ್ದೇಶಕರು, ಸಹಕಾರಿ ಮುಖಂಡರು ಭಾಗವಹಿಸುವರು ಎಂದು ಹೇಳಿದರು.

ಶಿಮುಲ್ ಅಧ್ಯಕ್ಷ ಎಚ್.ಎನ್.ವಿದ್ಯಾಧರ, ಸಹಕಾರಿ ಯೂನಿಯನ್ ಜಿಲ್ಲಾಧ್ಯಕ್ಷ ಸಿ.ಹನುಮಂತಪ್ಪ, ಸಿಇಒ ಯಶವಂತಕುಮಾರ್, ಡಿಸಿಸಿ ಬ್ಯಾಂಕ್ ಉಪಾಧ್ಯಕ್ಷ ಜಿ.ಎನ್.ಸುಧೀರ್, ನಿರ್ದೇಶಕರಾದ ಬೇಳೂರು ಗೋಪಾಲಕೃಷ್ಣ, ಎಸ್.ಕೆ.ಮರಿಯಪ್ಪ, ಎಚ್.ಬಿ.ದಿನೇಶ್, ಮಹಾಲಿಂಗಶಾಸ್ತ್ರಿ ಸುದ್ದಿಗೋಷ್ಠಿಯಲ್ಲಿದ್ದರು.