ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ 
ಶಿವಮೊಗ್ಗ

ರಾಜ್ಯ ರಾಜಕಾರಣ ಶೀಘ್ರ ಬದಲು | K.S.Eshwarappa

ಪ್ರಮುಖ ಮುಖ್ಯಾಂಶಗಳು

  • ಸಿಎಂ, ಡಿಸಿಎಂ ಮತ್ತು ಶಾಸಕರ ಅಧಿಕಾರ ದಾಹ
  • ಸರ್ಕಾರದ ತಿಕ್ಕಾಟದಲ್ಲಿ ಅಭಿವೃದ್ಧಿ ಕಾಣದ ರಾಜ್ಯ
  • ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ ವಾಗ್ದಾಳಿ
ಶಿವಮೊಗ್ಗ: ಸದ್ಯದ ಪರಿಸ್ಥಿತಿ ಗಮನಿಸಿದರೆ ಎರಡು ತಿಂಗಳಲ್ಲಿ ರಾಜ್ಯ ರಾಜಕಾರಣ(State Politics)ದ ಚಿತ್ರಣ ಸಂಪೂರ್ಣ ಬದಲಾಗಲಿದೆ ಎಂದು ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ ಹೇಳಿದರು.
ರಾಜ್ಯದಲ್ಲಿ ಈಗಾಗಲೇ ಹಲವು ಸಮಸ್ಯೆ ಇದ್ದು ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಮತ್ತು ಶಾಸಕರು ಅಧಿಕಾರ ದಾಹದಿಂದ ನಡೆದುಕೊಳ್ಳುತ್ತಿದ್ದಾರೆ. ಸರ್ಕಾರದ ತಿಕ್ಕಾಟದಲ್ಲಿ ರಾಜ್ಯ ಅಭಿವೃದ್ಧಿ ಕಾಣದೆ ಒದ್ದಾಡುತ್ತಿದೆ ಎಂದು ಸೋಮವಾರ ಸುದ್ದಿಗೋಷ್ಠಿಯಲ್ಲಿ ವಾಗ್ದಾಳಿ ನಡೆಸಿದರು.
ರಾಜ್ಯದ ಅಭಿವೃದ್ಧಿ ಬಗ್ಗೆ ಕಾಂಗ್ರೆಸ್‌ನ ಯಾವ ಸಚಿವರು, ಶಾಸಕರಿಗೂ ಆಸಕ್ತಿ ಇಲ್ಲ. ಶಾಸಕರು ಮಂತ್ರಿ ಸ್ಥಾನಕ್ಕಾಗಿ ದೆಹಲಿ ಯಾತ್ರೆ(Delhi Yatra) ಮಾಡುತ್ತಿದ್ದು, ಎರಡು ತಿಂಗಳಲ್ಲಿ ರಾಜಕಾರಣ ಸ್ವರೂಪ ಬದಲಾಗುವುದು ನಿಶ್ಚಿತ ಎಂದರು.
ದಾವಣಗೆರೆ ಉಪ ಚುನಾವಣೆ(By-election)ಯಲ್ಲಿ ಮುಸ್ಲಿಮರಿಗೆ ಟಿಕೆಟ್ ನೀಡುವಂತೆ ಒತ್ತಾಯ ಕೇಳಿಬಂದಿತ್ತು. ಇದೇ ವೇಳೆ ಸಚಿವ ಜಮೀರ್ ಅಹ್ಮದ್ ಸೇರಿ ಹಲವರು ತಾವೇ ಮುಸ್ಲಿಂ ನಾಯಕರೆಂದು ಬಿಂಬಿಸಿಕೊಳ್ಳುವ ಪ್ರಯತ್ನ ಮಾಡಿದ್ದರು. ಇಡೀ ರಾಷ್ಟ್ರದಲ್ಲಿ ಮುಸ್ಲಿಂ ನಾಯಕರನ್ನು ನೆಚ್ಚಿಕೊಂಡು ಕಾಂಗ್ರೆಸ್ ನೆಲಕಚ್ಚಿದೆ. ರಾಜ್ಯದಲ್ಲಿ ಕಾಂಗ್ರೆಸ್ ಸ್ವಲ್ಪಮಟ್ಟಿಗೆ ಉಸಿರಾಡುತ್ತಿದ್ದು, ಇಲ್ಲಿಯೂ ಕಾಂಗ್ರೆಸ್ ಧೂಳೀಪಟವಾಗಲಿದೆ ಎಂದು ಎಚ್ಚರಿಕೆ ನೀಡಿದರು.