ಶಿಕಾರಿಪುರದ ಬಾಲಕಿಯರ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಆಯೋಜಿಸಿದ್ದ ಸೈಬರ್ ಜಾಗೃತಿ ಕಾರ್ಯಕ್ರಮವನ್ನು ಸಿ.ಬಿ.ವೆಂಕಟೇಶ್ ಉದ್ಘಾಟಿಸಿದರು. ಧರ್ಮನಾಯ್ಕ, ಅರವಿಂದ್ ಇತರರಿದ್ದರು. 
ಶಿವಮೊಗ್ಗ

ಸೈಬರ್ ಅಪರಾಧಗಳಿಂದ ದೂರವಿರಿ

ಸೋಮಶೇಖರ ಎನ್
ಶಿಕಾರಿಪುರ: ಮಾಹಿತಿ ತಂತ್ರಜ್ಞಾನ ಯುಗದಲ್ಲಿ ಸೈಬರ್ ಅಪರಾಧಗಳು ಹೆಚ್ಚುತ್ತಿದ್ದು, ಮೊಬೈಲ್ ಹ್ಯಾಕ್ ಮಾಡುವ ಮೂಲಕ ಮೋಸ ಮಾಡುತ್ತಿದ್ದಾರೆ. ಯುವಜನರು ಎಲೆಕ್ಟ್ರಾನಿಕ್ ಉಪಕರಣಗಳನ್ನು ಬಳಸುವಾಗ ಎಚ್ಚರ ವಹಿಸಬೇಕು ಎಂದು ಸರ್ಕಾರಿ ಪದವಿಪೂರ್ವ ಕಾಲೇಜಿನ ಪ್ರಾಚಾರ್ಯ ಸಿ.ಬಿ.ವೆಂಕಟೇಶ್ ಹೇಳಿದರು.
ಪಟ್ಟಣದ ಬಾಲಕಿಯರ ಸರ್ಕಾರಿ ಪದವಿಪೂರ್ವ ಕಾಲೇಜಿನ ಸಹಯೋಗದಲ್ಲಿ ಶಿವಮೊಗ್ಗ ಪೊಲೀಸ್ ಸೈಬರ್ ಅಪರಾಧ ಪೊಲೀಸ್ ಠಾಣೆ ವತಿಯಿಂದ ಆಯೋಜಿಸಿದ್ದ ಸೈಬರ್ ಜಾಗೃತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಯುವಜನತೆ ಮೊಬೈಲ್‌ಗಳನ್ನು ಒಳ್ಳೆಯ ಕೆಲಸಗಳಿಗೆ ಮಾತ್ರ ಬಳಸಬೇಕು ಎಂದು ತಿಳಿಸಿದರು.
ಶಿವಮೊಗ್ಗದ ಸೈಬರ್ ಕ್ರೈಂ ಪೊಲೀಸ್ ಧರ್ಮನಾಯ್ಕ ಮಾತನಾಡಿ, ಯುವಜನರು ಸೈಬರ್ ಅಪರಾಧಗಳ ಬಗ್ಗೆ ಎಚ್ಚರ ವಹಿಸಬೇಕು. ಸಿಮ್ ಖರೀದಿಸುವಾಗ, ಮೊಬೈಲ್ ಬಳಕೆ ಮಾಡುವಾಗ ಜಾಗರೂಕರಾಗಿರಬೇಕು ಎಂದರು. ಸೈಬರ್ ಕ್ರೈಂ ಪೊಲೀಸ್ ಅರವಿಂದ್, ಕಾಲೇಜಿನ ಉಪನ್ಯಾಸಕರು, ವಿದ್ಯಾರ್ಥಿಗಳು ಭಾಗವಹಿಸಿದ್ದರು.