ಶಿಕಾರಿಪುರದ ಸ್ವಾಮಿ ವಿವೇಕಾನಂದ ವಿದ್ಯಾಸಂಸ್ಥೆಯಲ್ಲಿ ವಿದ್ಯಾರ್ಥಿಗಳಿಗೆ ಆಯೋಜಿಸಿದ್ದ ಸ್ಪರ್ಧಾತ್ಮಕ ಪರೀಕ್ಷೆಗೆ ತಯಾರಿ ಉಪನ್ಯಾಸ ಕಾರ್ಯಕ್ರಮವನ್ನು ಡಾ. ಶಿವಕುಮಾರ್ ಉದ್ಘಾಟಿಸಿದರು. ಎಂ.ಬಿ.ಶಿವಕುಮಾರ್, ಮಂಜುನಾಥ್, ಡಾ. ರವೀಂದ್ರ, ಡಾ. ವಿರೇಂದ್ರ ಇತರರಿದ್ದರು. 
ಶಿವಮೊಗ್ಗ

ಶ್ರದ್ಧೆಯಿಂದ ಅಧ್ಯಯನದಲ್ಲಿ ತೊಡಗಿಸಿಕೊಳ್ಳಿ

ಸೋಮಶೇಖರ ಎನ್
ಶಿಕಾರಿಪುರ: ಸ್ಪರ್ಧಾತ್ಮಕ ಯುಗದಲ್ಲಿ ನಿರಂತರ ಪರಿಶ್ರಮ ವಹಿಸಿ ಅಧ್ಯಯನ ನಡೆಸುವವರು ಯಶಸ್ವಿಯಾಗುತ್ತಾರೆ ಎಂದು ಸಾಧನಾ ಅಕಾಡೆಮಿ ಸ್ಥಾಪಕ ಮಂಜುನಾಥ್ ಹೇಳಿದರು.
ಸ್ವಾಮಿ ವಿವೇಕಾನಂದ ವಿದ್ಯಾಸಂಸ್ಥೆಯಲ್ಲಿ ಕುಮದ್ವತಿ ಪಿಯು ಹಾಗೂ ಪದವಿ ಕಾಲೇಜಿನ ವಿದ್ಯಾರ್ಥಿಗಳಿಗೆ ಆಯೋಜಿಸಿದ್ದ ಸ್ಪರ್ಧಾತ್ಮಕ ಪರೀಕ್ಷೆಗೆ ತಯಾರಿ ಹಾಗೂ ಎದುರಿಸುವುದು ಹೇಗೆ ಕುರಿತ ಉಪನ್ಯಾಸ ಕಾರ್ಯಕ್ರಮದಲ್ಲಿ ಮಾತನಾಡಿ, ವಿದ್ಯಾರ್ಥಿಗಳು ಶ್ರದ್ಧೆಯಿಂದ ಓದಿದರೆ ಅಸಾಧ್ಯವಾದುದನ್ನು ಸಾಧಿಸಬಹುದು. ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ವಿದ್ಯಾರ್ಥಿಗಳಿಗೆ ಅತ್ಯಂತ ನಿಖರ ಮಾಹಿತಿ ನೀಡುವ ಅಂತರ್ಜಾಲ ವ್ಯವಸ್ಥೆ ಇದೆ. ತಂತ್ರಜ್ಞಾನ ಕ್ಷೇತ್ರದಲ್ಲಿ ಮಹತ್ತರ ಪ್ರಗತಿ ಸಾಧಿಸಲಾಗುತ್ತಿದೆ ಎಂದು ತಿಳಿಸಿದರು.
ತಂತ್ರಜ್ಞಾನವನ್ನು ವಿದ್ಯಾರ್ಥಿಗಳು ಯಶಸ್ಸು ಸಾಧಿಸಲು ಬಳಸಿಕೊಳ್ಳಬೇಕು. ಸಾಧನಾ ಅಕಾಡೆಮಿ ಮುಖಾಂತರ ಸ್ಪರ್ಧಾತ್ಮಕ ಪರೀಕ್ಷೆಗಳ ಕುರಿತು ಉಚಿತ ತರಗತಿಗಳನ್ನು ಜಾಲತಾಣದಲ್ಲಿ ಅಪ್ಲೋಡ್ ಮಾಡಲಾಗಿದೆ ಎಂದರು.
ಸಂಸ್ಥೆ ಅಧ್ಯಕ್ಷ ಎಂ.ಬಿ.ಶಿವಕುಮಾರ್, ಡಾ. ವೀರೇಂದ್ರ, ಡಾ. ರವೀಂದ್ರ, ಡಾ. ಶಿವಕುಮಾರ್, ಮಧುಸೂದನ್, ಕುಬೇರಪ್ಪ, ರೋಟರಿ ಜೋನಲ್ ಲೆಫ್ಟಿನೆಂಟ್ ಎಂ.ಆರ್.ರಘು, ಸಿದ್ದಣ್ಣ, ಸುನೀಲ್, ವೀರಪ್ಪ, ಶಿಲ್ಪಾ ಇತರರಿದ್ದರು.