ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ
- ತೀರ್ಥಹಳ್ಳಿ ಗುಡ್ಡ ಕುಸಿತ ದುಃಖದ ಸಂಗತಿ
- ಜನಪರ ಆಡಳಿತಕ್ಕೆ ರಾಜ್ಯ ಸರ್ಕಾರ ವೇಗ ನೀಡಲಿ
- ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ ಸಲಹೆ
ಶಿವಮೊಗ್ಗ: ರಾಜ್ಯದ ವಿವಿಧ ಭಾಗಗಳಲ್ಲಿ ಭಾರಿ ಮಳೆಯಿಂದ ಭೂಕುಸಿತ(Landslide
) ಹಾಗೂ ಪ್ರವಾಹ ಘಟನೆಗಳು ಸಂಭವಿಸುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಮುನ್ನೆಚ್ಚರಿಕಾ ಕ್ರಮ ವಹಿಸಬೇಕಿದೆ ಎಂದು ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ(K.S.Eshwarappa) ಹೇಳಿದರು.
ನಗರದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿ, ತೀರ್ಥಹಳ್ಳಿ ಸಮೀಪ ಗುಡ್ಡ ಕುಸಿದು ಮೂವರು ಮೃತಪಟ್ಟಿರುವ ಘಟನೆ ದುಃಖದ ಸಂಗತಿ. ಇಂತಹ ಸಂದರ್ಭಗಳಲ್ಲಿ ಆಡಳಿತ ಯಂತ್ರ ಚುರುಕಾಗಿ ಕಾರ್ಯನಿರ್ವಹಿಸುವ ಅಗತ್ಯವಿದೆ ಎಂದರು.
ರಾಜ್ಯದಲ್ಲಿ ಪ್ರಕೃತಿ ಅನುಕೂಲಕರವಾಗಿರುವ ಸಂದರ್ಭದಲ್ಲಿ ಸರ್ಕಾರ ಆಡಳಿತದತ್ತ ಹೆಚ್ಚಿನ ಗಮನಹರಿಸಬೇಕು. ಎಲ್ಲ ಜಿಲ್ಲೆಗಳಿಗೆ ಉಸ್ತುವಾರಿ ಸಚಿವರನ್ನು ನೇಮಿಸಬೇಕು. ರಾಜ್ಯದಲ್ಲಿ ರಾಜಕೀಯ ಬೆಳವಣಿಗೆ(Political Development)ಗಳಿಂದ ಆಡಳಿತಕ್ಕೆ ಹಿನ್ನಡೆ ಆಗಬಾರದು. ಜನರ ಸಮಸ್ಯೆಗಳ ಪರಿಹಾರ, ರೈತರ ಹಿತಾಸಕ್ತಿ, ಕುಡಿಯುವ ನೀರಿನ ನಿರ್ವಹಣೆ ಹಾಗೂ ಅಭಿವೃದ್ಧಿ ಕಾಮಗಾರಿಗಳಿಗೆ ವೇಗ ನೀಡುವ ನಿಟ್ಟಿನಲ್ಲಿ ಸರ್ಕಾರ ಪರಿಣಾಮಕಾರಿ ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದರು.
ಸರ್ಕಾರ ಅಧಿಕಾರಿಗಳ ಮೇಲಷ್ಟೇ ಅವಲಂಬಿತವಾಗದೆ, ಸಂಪೂರ್ಣ ಸಚಿವ ಸಂಪುಟ(Cabinet)ದೊಂದಿಗೆ ಸಮನ್ವಯ ಸಾಧಿಸಿ ಜನಪರ ಆಡಳಿತ ನೀಡಬೇಕು. ಉಳಿದಿರುವ ಅವಧಿಯಲ್ಲಿ ಅಭಿವೃದ್ಧಿ ಕಾರ್ಯಗಳಿಗೆ ಆದ್ಯತೆ ನೀಡಬೇಕು ಎಂದರು.