ಪ್ರಭುಲಿಂಗ ಕವಳಿಕಟ್ಟಿ ಆರೋಗ್ಯ ಇಲಾಖೆ ಪ್ರಗತಿ ಪರಿಶೀಲನಾ ಸಭೆ ನಡೆಸಿದರು. ಬಿ.ನಿಖಿಲ್, ವಿ.ಅಭಿಷೇಕ್, ಎನ್.ಹೇಮಂತ್, ಡಾ.ನಟರಾಜ್ ಉಪಸ್ಥಿತರಿದ್ದರು.
- ಮೇ ಅಂತ್ಯದವರೆಗೂ ನಿಗಾ ಅವಶ್ಯ
- ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಸೂಚನೆ
ಶಿವಮೊಗ್ಗ: ಜಿಲ್ಲೆಯ ವಿವಿಧೆಡೆ ಒಂದೆರಡು ಮಳೆಯಾಗಿದ್ದರೂ ಕೆಎಫ್‌ಡಿ (kfd) (ಮಂಗನ ಕಾಯಿಲೆ) ಭೀತಿ ಇನ್ನೂ ದೂರಾಗಿಲ್ಲ. ಹೀಗಾಗಿ ಮೇ ಅಂತ್ಯದವರೆಗೂ ತೀವ್ರ ಎಚ್ಚರಿಕೆ ವಹಿಸಬೇಕಾದ್ದು ಅವಶ್ಯ. ಜ್ವರ (fear) ದ ಪ್ರಕರಣಗಳನ್ನು ಶೀಘ್ರವಾಗಿ ಪರಿಗಣಿಸಿ ಚಿಕಿತ್ಸೆ (treatment) ನೀಡಬೇಕು. ಜ್ವರಪೀಡಿತರ ಸರ್ವೇ ನಡೆಸಬೇಕೆಂದು ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಸೂಚಿಸಿದರು.
ಮಂಗಳವಾರ ಆರೋಗ್ಯ ಇಲಾಖೆಗೆ ಸಂಬಂಧಿಸಿದ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಅವರು, ಮಂಗಗಳು ಸಾವನ್ನಪ್ಪಿದ ಹಾಟ್‌ಸ್ಟಾಟ್‌ಗಳಲ್ಲಿ ಹೆಚ್ಚಿನ ನಿಗಾವಹಿಸಬೇಕು. ಎಲ್ಲ ತಾಲೂಕು ಆಸ್ಪತ್ರೆಗಳಲ್ಲಿ ಮಂಗನ ಕಾಯಿಲೆ ಚಿಕಿತ್ಸೆಗಾಗಿ 10 ಪ್ರತ್ಯೇಕ ಹಾಸಿಗೆಗಳನ್ನು ಮೀಸಲಿರಿಸಬೇಕೆಂದರು.
ಕೆಎಫ್‌ಡಿ ಕುರಿತು ಸ್ಥಳೀಯರಲ್ಲಿ ಜಾಗೃತಿ ಮೂಡಿಸಬೇಕು. ಯಾವುದೇ ರೀತಿಯ ಜ್ವರಕ್ಕೆ ಶೀಘ್ರ ಚಿಕಿತ್ಸೆ ನೀಡುವುದು ಸೇರಿದಂತೆ ಪರಿಣಾಮಕಾರಿಯಾದ ನಿಯಂತ್ರಣ ಕ್ರಮಗಳನ್ನು ಕೈಗೊಳ್ಳಬೇಕು. ಸಾಗರ, ಸೊರಬ, ಹೊಸನಗರ ಮತ್ತು ತೀರ್ಥಹಳ್ಳಿ ಭಾಗದಲ್ಲಿ ಜನರು ಸಾಕಷ್ಟು ಎಚ್ಚರಿಕೆ ವಹಿಸಬೇಕು. ತೋಟಕ್ಕೆ, ಕಾಡಿಗೆ ಹೋಗುವ ಜನರು ಅತ್ಯಂತ ಜಾಗರೂಕತೆಯಿಂದ ಇರಬೇಕು. ಡೇಪಾ ಎಣ್ಣೆಯನ್ನು ಮೈಗೆ ಲೇಪಿಸಿಕೊಳ್ಳಬೇಕೆಂದರು.
ಆರೋಗ್ಯ ಇಲಾಖೆ, ಪಶುಪಾಲನೆ, ಪಶು ವೈದ್ಯಕೀಯ, ಅರಣ್ಯ ಹಾಗೂ ಕಂದಾಯ ಇಲಾಖೆಗಳ ನಡುವೆ ಕೆಎಫ್‌ಡಿ ನಿಯಂತ್ರಣ ಸಂಬಂಧ ಸಮನ್ವಯ ಅಗತ್ಯ ಎಂದು ಹೇಳಿದರು.
ಜಿಪಂ ಸಿಇಒ ಎನ್.ಹೇಮಂತ್, ಎಸ್ಪಿ ಬಿ.ನಿಖಿಲ್, ಅಪರ ಜಿಲ್ಲಾಧಿಕಾರಿ ವಿ.ಅಭಿಷೇಕ್, ಜಿಲ್ಲಾ ಆರೋಗ್ಯಾಧಿಕಾರಿ ಡಾ.ನಟರಾಜ್, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ನಾಗರಾಜ ನಾಯ್ಕ, ಆರ್‌ಸಿಎಚ್ ಅಧಿಕಾರಿ ಡಾ.ಒ.ಮಲ್ಲಪ್ಪ, ಡಿಎಲ್‌ಒ ಡಾ.ಕಿರಣ್, ಪ್ರಮುಖರಾದ ಡಾ.ಗುಡದಪ್ಪ ಕಸಬಿ, ಡಾ.ಹರ್ಷವರ್ಧನ ಸಭೆಯಲ್ಲಿ ಉಪಸ್ಥಿತರಿದ್ದರು.
ಸಾಂಕ್ರಾಮಿಕ ರೋಗ ನಿಯಂತ್ರಿಸಿ
ಸಾಂಕ್ರಾಮಿಕ ರೋಗಗಳಾದ ಟೈಫಾಯ್ಸ, ವೈರಲ್ ಹೆಪಟೈಟಿಸ್, ಕ್ಷಯ, ಮಲೇರಿಯಾ, ಡೆಂೆ, ಚಿಕುನ್‌ಗುನ್ಯಾದಂತಹ ಸಾಂಕ್ರಾಮಿಕ ರೋಗಗಳಿಗೆ ಕಾರಣವಾಗುವ ಅಂಶಗಳನ್ನು ಗುರುತಿಸಿ, ಆರಂಭದಲ್ಲಿಯೇ ನಿಯಂತ್ರಣ ಕ್ರಮಗಳನ್ನು ಪರಿಣಾಮಕಾರಿಯಾಗಿ ಕೈಗೊಳ್ಳಬೇಕು.
ಶುದ್ಧ ಕುಡಿಯುವ ನೀರು ಬಳಕೆ ಮತ್ತು ಮನೆ ಸುತ್ತಮುತ್ತ ಸ್ವಚ್ಛತೆಯನ್ನು ಕಾಪಾಡಿಕೊಳ್ಳುವಂತೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಬೇಕು. ಕುಡಿಯುವ ನೀರು ಸರಬರಾಜು ಮಾಡುವ ಟ್ಯಾಂಕ್‌ಗಳನ್ನು ಕಾಲ ಕಾಲಕ್ಕೆ ಸ್ವಚ್ಛಗೊಳಿಸಿ ಸಮರ್ಪಕವಾಗಿ ಕ್ಲೋರಿನೀಕರಣ ಮಾಡಬೇಂದು ಜಿಲ್ಲಾಧಿಕಾರಿ ಹೇಳಿದರು.
ಕೆಎಫ್‌ಡಿ 59 ಪಾಸಿಟಿವ್
ಜಿಲ್ಲೆಯಲ್ಲಿ ಇಲ್ಲಿಯವರೆಗೆ 5,202 ಆರ್‌ಟಿಪಿಸಿಆರ್ ಪರೀಕ್ಷೆ ನಡೆಸಿದ್ದು 59 ಮಂದಿಯಲ್ಲಿ ಕೆಎಫ್‌ಡಿ ವೈರಸ್ ಪತ್ತೆಯಾಗಿದೆ. ಒಬ್ಬರು ಸಾವನ್ನಪ್ಪಿದ್ದಾರೆ. 457 ಟಿಕ್ ಸಂಗ್ರಹಿಸಿದ್ದು ಇದರಲ್ಲಿ ಯಾವುದೇ ಪಾಸಿಟಿವ್ ಕಂಡುಬಂದಿಲ್ಲ. 114 ಮಂಗಗಳ ಸಾವು ಸಂಭವಿಸಿದ್ದು ಮಂಗಗಳ ಅಟಾಪ್ಸಿಯಲ್ಲಿ 31 ಪಾಸಿಟಿವ್ ಪತ್ತೆಯಾಗಿದೆ. ಮಂಗಗಳ ಸಾವು ಸಂಭವಿಸಿದ ಸುತ್ತಮುತ್ತಲಿನ ಪ್ರದೇಶವನ್ನು ಹಾಟ್‌ಸ್ಪಾಟ್ ಎಂದು ಗುರುತಿಸಿ ರಾಸಾಯನಿಕಗಳನ್ನು ಸಿಂಪಡಿಸಲಾಗಿದೆ. ಹೈರಿಸ್ಕ್ ಪ್ರದೇಶಗಳಲ್ಲಿ ಟಿಕ್ ಕಲೆಕ್ಷನ್ ಮಾಡಲಾಗುತ್ತಿದೆ ಎಂದು ಡಾ.ನಾಗರಾಜ ನಾಯ್ಕ ಸಭೆಗೆ ಮಾಹಿತಿ ನೀಡಿದರು.
ಮೂರು ತಿಂಗಳಿಗೆ 3,906 ನಾಯಿ ಕಡಿತ
ಜಿಲ್ಲೆಯಲ್ಲಿ ಜನವರಿಯಿಂದ ಇಲ್ಲಿಯವರೆಗೆ 3,906 ನಾಯಿ ಕಡಿತ ಪ್ರಕರಣ ದಾಖಲಾಗಿದ್ದು ಯಾವುದೇ ಸಾವು ಸಂಭವಿಸಿಲ್ಲ. ಜಿಲ್ಲೆಯಲ್ಲಿ 2025ರ ಏಪ್ರಿಲ್‌ನಿಂದ ಕಳೆದ ತಿಂಗಳವರೆಗೆ ಜಿಲ್ಲೆಯಲ್ಲಿ 257 ಎಚ್‌ಐವಿ ಪ್ರಕರಣಗಳು ದಾಖಲಾಗಿದ್ದು 230 ಜನರಿಗೆ ಎಆರ್‌ಟಿ ಚಿಕಿತ್ಸೆ ನೀಡಲಾಗುತ್ತಿದೆ. 14 ಜನ ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ಸಭೆಗೆ ತಿಳಿಸಿದರು.
ಈ ವೇಳೆ ಮಾತನಾಡಿದ ಜಿಲ್ಲಾಧಿಕಾರಿ, ನಾಯಿ ಕಚ್ಚಿದ ತಕ್ಷಣ ವ್ಯಕ್ತಿಗೆ ಸೂಕ್ತ ಚಿಕಿತ್ಸೆ ನೀಡಬೇಕು. ಕಡ್ಡಾಯವಾಗಿ ಆಂಟಿ ರೇಬಿಸ್ ಚುಚ್ಚುಮದ್ದು ಕೊಡಬೇಕು. ರೇಬಿಸ್ ಚಿಕಿತ್ಸೆಯನ್ನು ಯಾವುದೇ ಕಾರಣಕ್ಕೂ ಅಪೂರ್ಣಗೊಳಿಸಬಾರದು ಎಂದು ಹೇಳಿದರು.
ಸಾರ್ವಜನಿಕರು ಸಾಕು ನಾಯಿಗಳಿಗೆ, ಸ್ಥಳೀಯ ಸಂಸ್ಥೆಗಳು, ಪಶುಪಾಲನೆ ಮತ್ತು ಪಶು ವೈದ್ಯಕೀಯ ಇಲಾಖೆ ಸೇರಿದಂತೆ ಸಂಬಂಧಿಸಿದ ಇಲಾಖೆಗಳು ಬೀದಿ ನಾಯಿಗಳಿಗೆ ಆಂಟಿ ರೇಬಿಸ್ ಚುಚ್ಚುಮದ್ದು ನೀಡಲು ಕ್ರಮ ಕೈಗೊಳ್ಳಬೇಕು. ಸರ್ಕಾರಿ ಕಚೇರಿಗಳು, ವಿವಿಧ ಸಂಸ್ಥೆಗಳ ಆವರಣಗಳಲ್ಲಿನ ನಾಯಿಗಳನ್ನು ನಿಯಮಾನುಸಾರ ಒಂದು ಬಾರಿ ಬೇರೆ ಕಡೆ ಕೊಂಡೊಯ್ದು ಅವುಗಳಿಗೆ ಆಶ್ರಯ ನೀಡಬೇಕು. ಶಾಲೆ, ಹೋಟೆಲ್, ಬೀದಿ ಬದಿ ತಿಂಡಿ ಅಂಗಡಿಗಳಲ್ಲಿ ಉಳಿದ ತ್ಯಾಜ್ಯ ಆಹಾರವನ್ನು ಸಮರ್ಪಕವಾಗಿ ವಿಲೇವಾರಿ ಮಾಡಬೇಕು ಎಂದು ಸೂಚಿಸಿದರು.
47 ಜನರಿಗೆ ಹಾವು ಕಡಿತ
ಜಾನುವಾರುಗಳಿಂದ ಕೆಎಫ್‌ಡಿ ವೈರಸ್ ಹರಡುವುದನ್ನು ತಡೆಗಟ್ಟುವ ಸಲುವಾಗಿ ಜಾನುವಾರುಗಳಿಗೆ ಲಸಿಕೆ ನೀಡಬೇಕು. ದಾಸ್ತಾನು ಇಲ್ಲದಿದ್ದರೆ ಈ ತಕ್ಷಣ ಲಸಿಕೆ ತರಿಸಿಕೊಳ್ಳಬೇಕು. ಜಾನುವಾರುಗಳಿಗೆ ಎರಡು ಡೋಸ್ ಲಸಿಕೆ ನೀಡಬೇಕು. ಜಾನುವಾರುಗಳಿಗೆ ಲೇಪನ ಮಾಡಲು ಡೇಪಾ ಎಣ್ಣೆ ಪೂರೈಕೆ ಮಾಡಬೇಕು.