ನೀಟ್ ಅಕ್ರಮ ಖಂಡಿಸಿ ಪ್ರತಿಭಟನೆ ನಡೆಸಿದ ಎನ್‌ಎಸ್‌ಯುಐ ಕಾರ್ಯಕರ್ತರು ಡಿಸಿ ಪ್ರಭುಲಿಂಗ ಕವಳಿಕಟ್ಟಿ ಅವರಿಗೆ ಮನವಿ ಸಲ್ಲಿಸಿದರು. ವಿಜಯಕುಮಾರ್, ರವಿಕುಮಾರ್, ರವಿ, ಆದಿತ್ಯ, ವರುಣ್, ಚಂದ್ರೋಜಿ ರಾವ್, ಅಭಿಷೇಕ್ ಇತರರಿದ್ದರು. 
ಶಿವಮೊಗ್ಗ

ಬಡ ವಿದ್ಯಾರ್ಥಿಗಳ ನಂಬಿಕೆಗೆ ಧಕ್ಕೆ I poor students

ಪ್ರಮುಖ ಮುಖ್ಯಾಂಶಗಳು

  • ನೀಟ್ ಮರುಪರೀಕ್ಷೆಯಿಂದ ಹೊರೆ
  • ಎನ್‌ಎಸ್‌ಯುಐ ಕಾರ್ಯಕರ್ತರ ಪ್ರತಿಭಟನೆ
ಶಿವಮೊಗ್ಗ: ನೀಟ್(neet) ಪ್ರಶ್ನೆ ಪತ್ರಿಕೆ ಸೋರಿಕೆ ಕೇಂದ್ರ ಸರ್ಕಾರದ ವೈಫಲ್ಯಕ್ಕೆ ನಿದರ್ಶನ ಎಂದು ಆರೋಪಿಸಿ ಎನ್‌ಎಸ್‌ಯುಐ (nsui) ಕಾರ್ಯಕರ್ತರು ಹಾಗೂ ವಿದ್ಯಾರ್ಥಿಗಳು ಗುರುವಾರ ಡಿಸಿ ಕಚೇರಿ ಎದುರು ಪ್ರತಿಭಟನೆ (protest) ನಡೆಸಿದರು.
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆಯ ವದಂತಿಗೆ ಪುಷ್ಟಿ ಎಂಬಂತೆ ಕೇಂದ್ರ ಸರ್ಕಾರಿ ಈ ಹಿಂದಿನ ಪರೀಕ್ಷೆಯನ್ನು ರದ್ದುಗೊಳಿಸಿ, ಮರು ಪರೀಕ್ಷೆಗ ನಿರ್ಧಾರ ಮಾಡಿದೆ. ಇದರಿಂದ ಗ್ರಾಮೀಣ, ಬಡ ಮತ್ತು ಮಧ್ಯಮ ವರ್ಗದ ವಿದ್ಯಾರ್ಥಿಗಳ ಕನಸನ್ನು ನುಚ್ಚು ನೂರು ಮಾಡಿದೆ ಎಂದು ದೂರಿದರು.
ಲಕ್ಷಾಂತರ ವಿದ್ಯಾರ್ಥಿಗಳು ಕುಟುಂಬದ ಆರ್ಥಿಕ ಸಂಕಷ್ಟಗಳ ನಡುವೆಯೂ ಉತ್ತಮ ಶಿಕ್ಷಣ ಪಡೆಯಲು ಹಾತೊರೆಯುತ್ತಿದ್ದಾರೆ. ವೈದ್ಯಕೀಯ ಕ್ಷೇತ್ರದಲ್ಲಿ ಸೇವೆ ಸಲ್ಲಿಸುವ ಕನಸು ಕಂಡು ಅನೇಕ ವರ್ಷಗಳ ಕಾಲ ಪರಿಶ್ರಮಪಡುತ್ತಿದ್ದಾರೆ. ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಭವಿಷ್ಯವನ್ನಲ್ಲದೆ ಪಾಲಕರ ನಂಬಿಕೆ ಮತ್ತು ವಿಶ್ವಾಸವನ್ನೂ ಹಾಳು ಮಾಡುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ರಾಜಸ್ಥಾನದ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತನ ಮೂಲಕವೇ ಪ್ರಶ್ನೆ ಪತ್ರಿಕೆ ಸೋರಿಕೆ ಆಗಿರುವುದು ಶೋಚನಿಯ.ದೇಶಾದ್ಯಂತ ವೈದ್ಯಕೀಯ ಶಿಕ್ಷಣ ಪ್ರವೇಶದಲ್ಲಿ ಪಾರದರ್ಶಕ, ಸಮಾನ ಅವಕಾಶ ಹಾಗೂ ಮೆರಿಟ್ ಆಧಾರಿತ ಪ್ರವೇಶ ವ್ಯವಸ್ಥೆ ಕಲ್ಪಿಸುವ ಉದ್ದೇಶದಿಂದ ಮನಮೋಹನ್ ಸಿಂಗ್ ನೇತೃತ್ವದ ಯುಪಿಎ ಸರ್ಕಾರ 2012ರಲ್ಲಿ ನೀಟ್ ವ್ಯವಸ್ಥೆ ಜಾರಿಗೆ ತಂದಿತ್ತು. ಆದರೆ ಇಂದು ಅದೇ ವ್ಯವಸ್ಥೆ ಪ್ರಶ್ನೆಪತ್ರಿಕೆ ಸೋರಿಕೆ ಆರೋಪಗಳು, ಕೋಚಿಂಗ್ ಮಾಫಿಯಾ, ಪರೀಕ್ಷಾ ಅಕ್ರಮ ಮತ್ತು ಹಣದ ಪ್ರಭಾವದಿಂದ ತನ್ನ ಮೂಲ ಉದ್ದೇಶವನ್ನೇ ಕಳೆದುಕೊಂಡಿದೆ ಎಂದು ಬೇಸರ ವ್ಯಕ್ತಪಡಿಸಿದರು.
ಎನ್‌ಎಸ್‌ಯುಐ ಜಿಲ್ಲಾಧ್ಯಕ್ಷ ವಿಜಯಕುಮಾರ್, ಕಾರ್ಯಾಧ್ಯಕ್ಷ ರವಿ, ನಗರಾಧ್ಯಕ್ಷ ರವಿಕುಮಾರ್, ಪ್ರಮುಖರಾದ ಚಂದ್ರೋಜಿ ರಾವ್, ಆದಿತ್ಯ, ವರುಣ್, ಅಭಿಷೇಕ್, ಯೂಸಫ್, ಅಲಾನ್, ಆಕಾಶ್, ಶ್ರೀಕಾಂತ್, ಸೃಜನ್, ಲೋಹಿತ್ ಪ್ರತಿಭಟನೆಯಲ್ಲಿದ್ದರು.
"

2024ರಲ್ಲೂ ನೀಟ್-ಯುಜಿ ಪ್ರಶ್ನೆ ಪತ್ರಿಕೆ ವಿವಾದ ದೇಶಾದ್ಯಂತ ಕೇಳಿಬಂದಿತ್ತು. ಆಗ ಕೇಂದ್ರ ಸರ್ಕಾರ ಅದನ್ನು ಮುಚ್ಚಿಹಾಕಿತ್ತು. ವಿದ್ಯಾರ್ಥಿಗಳಲ್ಲಿ ಈವರೆಗೂ ನೀಟ್ ಬಗ್ಗೆ ಸಂಪೂರ್ಣ ವಿಶ್ವಾಸ ಇಲ್ಲದಂತಾಗಿದೆ. ರಾಷ್ಟ್ರಮಟ್ಟದ ಪರೀಕ್ಷೆಯ ಭದ್ರತೆ ಮತ್ತು ವಿಶ್ವಾಸಾರ್ಹತೆ ಕಾಪಾಡುವಲ್ಲಿ ಕೇಂದ್ರ ಸರ್ಕಾರ ವಿಫಲವಾಗಿದೆ.

— ಎನ್‌ಎಸ್‌ಯುಐ ಕಾರ್ಯಕರ್ತರು