ಬೀದಿಬದಿ ವ್ಯಾಪಾರಿಗಳೊಂದಿಗೆ ಮಾಜಿ ಎಂಎಡಿಬಿ ಅಧ್ಯಕ್ಷ ಕೆ.ಎಸ್.ಗುರುಮೂರ್ತಿ ಮಾತನಾಡಿದರು. ಬಿಜೆಪಿ ಮುಖಂಡ ವಸಂತಗೌಡ ಇತರರಿದ್ದರು. 
ಶಿವಮೊಗ್ಗ

ಮುಷ್ಕರ ತಾತ್ಕಾಲಿಕ ಹಿಂಪಡೆದ ವ್ಯಾಪಾರಸ್ಥರು

ಜಿ. ಗಜೇಂದ್ರ
ಶಿಕಾರಿಪುರ: ತಾಲೂಕು ಕಚೇರಿ ಮುಂಭಾಗದಲ್ಲಿ ಸೋಮವಾರ ಶಿಕಾರಿಪುರ ಟೌನ್ ಬೀದಿ ಬದಿಯ ವ್ಯಾಪಾರಸ್ಥರು ಆರಂಭಿಸಿದ್ದ ಅನಿರ್ದಿಷ್ಟಾವಧಿ ಮುಷ್ಕರವನ್ನು ಮಂಗಳವಾರ ಸಂಸದ ಬಿ.ವೈ.ರಾಘವೇಂದ್ರ ಅವರು ಮೊಬೈಲ್‌ನಲ್ಲಿ ಮಾತನಾಡಿದ ನಂತರ ಸತ್ಯಾಗ್ರಹವನ್ನು ತಾತ್ಕಾಲಿಕವಾಗಿ ಹಿಂಪಡೆದರು.
ಮಾಜಿ ಎಂಎಡಿಬಿ ಅಧ್ಯಕ್ಷ ಕೆ.ಎಸ್.ಗುರುಮೂರ್ತಿ ಬೀದಿ ಬದಿ ವ್ಯಾಪಾರಸ್ಥರು ಸತ್ಯಾಗ್ರಹ ನಡೆಸುತ್ತಿದ್ದ ಸ್ಥಳಕ್ಕೆ ಆಗಮಿಸಿ ಮುಷ್ಕರ ನಿರತ ವ್ಯಾಪಾರಿಗಳಿಗೆ ಯುಗಾದಿ ಹಬ್ಬ ಮುಗಿಯುವವರೆಗೆ ಮುಷ್ಕರ ಹಿಂಪಡೆಯಬೇಕು ಎಂದು ಮನವಿ ಮಾಡಿದರು. ಅಲ್ಲದೆ ಸ್ಥಳದಲ್ಲಿಯೆ ಸಂಸದ ಬಿ.ವೈ.ರಾಘವೇಂದ್ರ ಅವರೊಂದಿಗೆ ಮೊಬೈಲ್‌ನಲ್ಲಿ ಮಾತನಾಡಿಸಿದಾಗ ಮುಷ್ಕರನಿರತರು ಸಂಸದರ ಮಾತಿಗೆ ಒಪ್ಪಿಗೆ ಸೂಚಿಸಿ ಮುಷ್ಕರ ಹಿಂಪಡೆದರು.