ಶಾಸಕ ಆರಗ ಜ್ಞಾನೇಂದ್ರ ಅವರು ದತ್ತು ಪಡೆದ ಪಟ್ಟಣದ ಶೀಬಿನಕೆರೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿದ್ಯಾರ್ಥಿಗಳನ್ನು ಹೂಗುಚ್ಛ ನೀಡಿ ಸ್ವಾಗತಿಸಿದರು. ಮಂಜುನಾಥ್, ವಿದ್ಯಾರ್ಥಿಗಳು ಹಾಗೂ ಪಾಲಕರು ಇದ್ದರು. 
ಶಿವಮೊಗ್ಗ

ಅವಶ್ಯಕತೆಗೆ ತಕ್ಕಂತೆ ಶಾಲೆ ಮೇಲ್ದರ್ಜೆಗೇರಿಸಿ

ಸೋಮಶೇಖರ ಎನ್
ತೀರ್ಥಹಳ್ಳಿ: ಸರ್ಕಾರಿ ಶಾಲೆಗಳನ್ನು ಅಗತ್ಯಕ್ಕೆ ಪೂರಕವಾಗಿ ಮೇಲ್ದರ್ಜೆಗೇರಿಸುವ ಅವಶ್ಯಕತೆ ಇದೆ ಎಂದು ಶಾಸಕ ಆರಗ ಜ್ಞಾನೇಂದ್ರ ಹೇಳಿದರು.
ಪಟ್ಟಣದ ಶೀಬಿನಕೆರೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಆಗಮಿಸಿದ ವಿದ್ಯಾರ್ಥಿಗಳಿಗೆ ಹೂಗುಚ್ಛ ನೀಡಿ ಸ್ವಾಗತಿಸಿದ ನಂತರ ಮಾತನಾಡಿ, ಶಾಲೆಗಳು ವ್ಯಕ್ತಿ ನಿರ್ಮಾಣದ ಕೇಂದ್ರವಾಗಿದ್ದು, ಈ ಶಾಲೆಯಲ್ಲಿ ವಿದ್ಯಾರ್ಥಿಗಳ ಸಂಖ್ಯೆ ಗಣನೀಯವಾಗಿ ಏರಿಕೆ ಆಗುತ್ತಿರುವುದು ಸಂತಸದ ಸಂಗತಿ. ಹಿರಿಯ ವಿದ್ಯಾರ್ಥಿಗಳು, ದಾನಿಗಳು ಹಾಗೂ ಪಾಲಕರ ನೆರವು ಸ್ಮರಣೀಯ ಎಂದು ತಿಳಿಸಿದರು.
ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣ ಅವಶ್ಯ. ಜಾತಿ, ಧರ್ಮ, ಬಡವರೆಂಬ ಭೇದವಿಲ್ಲದೆ ಕಲಿಯವ ಸರ್ಕಾರಿ ಶಾಲೆಗಳ ಸಬಲೀಕರಣ ಇಂದಿನ ತುರ್ತು ಕಾರ್ಯವಾಗಿದೆ. ಈ ಬಗ್ಗೆ ಸರ್ಕಾರ, ದಾನಿಗಳು ಮತ್ತು ಪಾಲಕರ ಬೆಂಬಲವೂ ಅನಿವಾರ್ಯ. ಈ ಶಾಲೆ ರಾಜ್ಯದಲ್ಲೇ ಮಾದರಿ ಆಗಬೇಕೆಂಬ ಹಿನ್ನೆಲೆಯಲ್ಲಿ ಸರ್ಕಾರದಿಂದ 48 ಲಕ್ಷ ರೂ. ಮಂಜೂರು ಮಾಡಿಸಿದ್ದೇನೆ ಎಂದರು.
ಪಪಂ ಅಧ್ಯಕ್ಷ ರತ್ನಾಕರ ಶೆಟ್ಟಿ ಮಾತನಾಡಿ, ಮನೆ ಮನೆಗೆ ತೆರಳಿ ಮಕ್ಕಳನ್ನು ಕರೆತರುವ ಪ್ರಯತ್ನ ನಡೆಸುತ್ತಿರುವುದು ಸಂತಸದ ಸಂಗತಿ ಎಂದು ತಿಳಿಸಿದರು. ಬಿಇಒ ಮಂಜುನಾಥ್, ಎಸ್‌ಡಿಎಂಸಿ ಅಧ್ಯಕ್ಷ ರಾಜೇಶ್, ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಕ ಕೆ.ವಿ.ರಮೇಶ್, ಸಿ.ನಾಗರಾಜ್, ಶಿಕ್ಷಕ ಮಹಾಬಲೇಶ್ವರ ಹೆಗ್ಡೆ ಇತರರಿದ್ದರು.