ಭದ್ರಾವತಿಯಲ್ಲಿ ಆಯೋಜಿಸಿದ್ದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರದ ಸಾಧಕರನ್ನು ಅಭಿನಂದಿಸಲಾಯಿತು. ಬಿ.ಕೆ.ಸಂಗಮೇಶ್ವರ್, ಗೀತಾ ರಾಜ್‌ಕುಮಾರ್, ಪರುಸಪ್ಪ ಕುರುಬರ ಇತರರಿದ್ದರು. 
ಶಿವಮೊಗ್ಗ

ವಿಐಎಸ್‌ಎಲ್ ಅಭಿವೃದ್ಧಿ ಚಿಂತನೆ ಸಂತಸದ ಸಂಗತಿ

ಸೋಮಶೇಖರ ಎನ್

ಪ್ರಮುಖ ಮುಖ್ಯಾಂಶಗಳು

  • ಭಾಷೆ ಉಳಿಸಿ ಬೆಳೆಸುವ ಸ್ವಾಭಿಮಾನ ಪ್ರತಿಯೊಬ್ಬ ಕನ್ನಡಿಗರಲ್ಲಿ ಇರಬೇಕು
  • ವಿಐಎಸ್‌ಎಲ್ ಕಾರ್ಖಾನೆಗೆ ಕೇಂದ್ರ ಸರ್ಕಾರ ಬಂಡವಾಳ ತೊಡಗಿಸಿ ಅಭಿವೃದ್ಧಿಪಡಿಸುವ ಚಿಂತನೆ ನಡೆಸುತ್ತಿರುವುದು ಸಂತಸದ ವಿಚಾರ
ಭದ್ರಾವತಿ: ನಾಡಿನಲ್ಲಿ ಕನ್ನಡ ಭಾಷೆ ಉಳಿಸಿ ಬೆಳೆಸುವ ಸ್ವಾಭಿಮಾನ ಪ್ರತಿಯೊಬ್ಬ ಕನ್ನಡಿಗರಲ್ಲಿ ಇರಬೇಕು ಎಂದು ಶಾಸಕ ಬಿ.ಕೆ.ಸಂಗಮೇಶ್ವರ್ ಹೇಳಿದರು.
ಹಳೇನಗರದ ಕನಕ ಮಂಟಪ ಮೈದಾನದಲ್ಲಿ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯಿಂದ ಆಯೋಜಿಸಿದ್ದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿ, ಕನ್ನಡವು ಪ್ರತಿಯೊಬ್ಬರ ಮನೆ ಮಾತಾಗಬೇಕು. ಕನ್ನಡ ರಾಜ್ಯೋತ್ಸವ ಒಂದು ದಿನಕ್ಕೆ ಸೀಮಿತವಾಗದೆ ನಿತ್ಯೋತ್ಸವವಾಗಬೇಕು. ಪಾಲಕರು ಮಕ್ಕಳಿಗೆ ಕನ್ನಡದ ಭಾಷಾಭಿಮಾನ ತಿಳಿಸಿಕೊಡಬೇಕು. ಕಲಿಕೆ ಕನ್ನಡ ಶಾಲೆಯಲ್ಲಿಯೇ ನಡೆಯುವಂತಾಗಬೇಕು ಎಂದು ತಿಳಿಸಿದರು.
"

ವಿಐಎಸ್‌ಎಲ್ ಕಾರ್ಖಾನೆಗೆ ಕೇಂದ್ರ ಸರ್ಕಾರ ಬಂಡವಾಳ ತೊಡಗಿಸಿ ಅಭಿವೃದ್ಧಿಪಡಿಸುವ ಚಿಂತನೆ ನಡೆಸುತ್ತಿರುವುದು ಸಂತಸದ ವಿಚಾರ. ಎಂಪಿಎಂ ಕಾರ್ಖಾನೆಯನ್ನು ಖಾಸಗಿ ಕಂಪನಿಗೆ ನೀಡುವ ಮೂಲಕ ಪುನರಾರಂಭಕ್ಕೆ ಎಲ್ಲ ಪ್ರಯತ್ನಗಳು ನಡೆಯುತ್ತಿವೆ. ಸಂಸದರು ಕೇಂದ್ರ ಸರ್ಕಾರದ ಮನವೊಲಿಸಿ 50 ಸಾವಿರ ಎಕರೆ ಭೂಮಿಯಲ್ಲಿ ಅಕೇಶಿಯಾ ಅರಣ್ಯೀಕರಣಕ್ಕೆ ಅರಣ್ಯ ಇಲಾಖೆಯಿಂದ ಎನ್‌ಒಸಿ ಕೊಡಿಸಿದರೆ ಶೀಘ್ರವಾಗಿ ಕಾರ್ಖಾನೆ ಆರಂಭವಾಗುತ್ತದೆ ಎಂದರು.

ತಹಸೀಲ್ದಾರ್ ಪರುಸಪ್ಪ ಕುರುಬರ, ಪೌರಾಯುಕ್ತ ಕೆ.ಎನ್.ಹೇಮಂತ್, ರಾಜ್ಯ ಸರ್ಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷ ಬಿ.ಸಿದ್ದಬಸಪ್ಪ, ಕ್ಷೇತ್ರ ಶಿಕ್ಷಣಾಧಿಕಾರಿ ಎ.ಕೆ.ನಾಗೇಂದ್ರಪ್ಪ, ಕಸಾಪ ತಾಲೂಕು ಅಧ್ಯಕ್ಷ ಎಚ್.ತಿಮ್ಮಪ್ಪ, ನಗರಸಭೆ ಅಧ್ಯಕ್ಷೆ ಗೀತಾ ರಾಜ್‌ಕುಮಾರ್, ಸೈಯದ್ ರಿಯಾಜ್, ಚನ್ನಪ್ಪ, ಬಸವರಾಜ್, ಲತಾ ಚಂದ್ರಶೇಖರ್, ಅನುಸುಧಾ ಮೋಹನ್, ಬಿ.ಎಸ್.ಗೋಪಾಲ್ ಇತರರಿದ್ದರು.