ತೀರ್ಥಹಳ್ಳಿಯಲ್ಲಿ ತಾಲೂಕು ಬಿಜೆಪಿ ಮಹಿಳಾ ಮೋರ್ಚಾ ಕಾರ್ಯಕಾರಣಿ ಸಭೆಯಲ್ಲಿ ಶಾಸಕ ಆರಗ ಜ್ಞಾನೇಂದ್ರ ಮಾತನಾಡಿದರು. ಮಧುರಾ ಶಿವಾನಂದ್, ಯಶೋದಾ ಮಂಜುನಾಥ್, ಹೆದ್ದೂರು ನವೀನ್ ಇತರರಿದ್ದರು. 
ಶಿವಮೊಗ್ಗ

ಮಹಿಳಾ ಸಬಲೀಕರಣಕ್ಕೆ ಆದ್ಯತೆ | BJP Women's Front meeting

ಶಿವಕುಮಾರ ಎಸ್.ಪಿ.
ತೀರ್ಥಹಳ್ಳಿ: ಪ್ರಧಾನಿ ನರೇಂದ್ರ ಮೋದಿ ಅವರ 12 ವರ್ಷಗಳ ಅವಧಿಯಲ್ಲಿ ಮಹಿಳಾ ಸಬಲೀಕರಣದ ಸಲುವಾಗಿ ಕೇಂದ್ರ ಸರ್ಕಾರ ಹತ್ತು ಹಲವು ಯೋಜನೆಗಳಿಗೆ ಆದ್ಯತೆ ನೀಡಿದೆ ಎಂದು ಶಾಸಕ ಆರಗ ಜ್ಞಾನೇಂದ್ರ ಹೇಳಿದರು.
ಪಟ್ಟಣದಲ್ಲಿ ಆಯೋಜಿಸಿದ್ದ ತಾಲೂಕು ಬಿಜೆಪಿ ಮಹಿಳಾ ಮೋರ್ಚಾ ಕಾರ್ಯಕಾರಣಿ ಸಭೆಯಲ್ಲಿ ಮಾತನಾಡಿ, ಶೇ.33 ಮಹಿಳಾ ಮೀಸಲಾತಿ ಜಾರಿಗೆ ಕಾಂಗ್ರೆಸ್ ಪಕ್ಷ ವಿರೋಧ ವ್ಯಕ್ತಪಡಿಸುವ ಮೂಲಕ ಮಹಿಳಾ ವಿರೋಧಿ ನಿಲುವನ್ನು ತಾಳಿದೆ ಎಂದು ಆರೋಪಿಸಿದರು.
ಸುಕನ್ಯಾ ಸಮೃದ್ಧಿ ಯೋಜನೆ, ಸಂಜೀವಿನಿ ಒಕ್ಕೂಟದ ಮೂಲಕ ಸಾಲದ ರೂಪದಲ್ಲಿ ನೀಡಲಾಗುವ ಆರ್ಥಿಕ ನೆರವು ಮಹಿಳೆಯರ ಸ್ವಾವಲಂಬಿ ಬದುಕಿಗೆ ಪೂರಕವಾಗಿದೆ. ತ್ರಿವಳಿ ತಲಾಖ್ ರದ್ದುಪಡಿಸುವ ಮೂಲಕ ಮುಸ್ಲಿಂ ಮಹಿಳೆಯರಿಗೂ ರಕ್ಷಣೆ ದೊರೆತಿದೆ ಎಂಬುದನ್ನು ಗಮನಿಸಬೇಕಿದೆ ಎಂದರು.
ದೇಶದ ಅತ್ಯುನ್ನತ ಸ್ಥಾನವಾದ ರಾಷ್ಟ್ರಪತಿ ಸ್ಥಾನವನ್ನೂ ಮಹಿಳೆ ಅಲಂಕರಿಸಿದ್ದಾರೆ. ಮಹಿಳೆ ಇಂದು ಅಬಲೆಯಾಗಿ ಉಳಿದಿಲ್ಲ. ಕೇಂದ್ರ ಸರ್ಕಾರದ ಆರ್ಥಿಕ ಸಚಿವೆ ಕೂಡಾ ಮಹಿಳೆ ಎಂಬುದು ಕೂಡಾ ಹೆಮ್ಮೆಯ ಸಂಗತಿ. ಸ್ಥಳೀಯ ಚುನಾವಣೆಗಳು ಸಮೀಪಿಸುತ್ತಿದ್ದು ರಾಜಕೀಯವಾಗಿ ಮಹಿಳೆಯರಿಗೆ ಹೆಚ್ಚಿನ ಸ್ಥಾನಮಾನಗಳು ದೊರೆಯಲಿದೆ ಎಂದು ಹೇಳಿದರು.
ಮಹಿಳಾ ಮೋರ್ಚಾ ಜಿಲ್ಲಾಧ್ಯಕ್ಷೆ ಮಧುರಾ ಶಿವಾನಂದ್, ಯಶೋದಾ ಮಂಜುನಾಥ್, ಬಿಜೆಪಿ ಮಂಡಲ ಅಧ್ಯಕ್ಷ್ಷ ಹೆದ್ದೂರು ನವೀನ್ ಇತರರಿದ್ದರು.