ಪೋಕ್ಸೋ ಕುರಿತ ಸಂಗ್ರಹ ಚಿತ್ರ 
ಶಿವಮೊಗ್ಗ

ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ, ಯುವಕನಿಗೆ 30 ವರ್ಷ ಜೈಲು | POCSO case

ಶಿವಮೊಗ್ಗ: ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ(Sexual assault) ನಡೆಸಿದ್ದ ಯುವಕನಿಗೆ ಶಿವಮೊಗ್ಗ(shivamogga)ದ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ಎಫ್‌ಟಿಎಸ್‌ಸಿ(ತ್ವರಿತ ವಿಶೇಷ ನ್ಯಾಯಾಲಯ)-1ರ ನ್ಯಾಯಾಧೀಶರು 30 ವರ್ಷ ಕಠಿಣ ಕಾರಾಗೃಹ ಶಿಕ್ಷೆ ಹಾಗೂ 1.85 ಲಕ್ಷ ರೂ. ದಂಡ ವಿಧಿಸಿ ಆದೇಶಿಸಿದ್ದಾರೆ.
21 ವರ್ಷದ ಯುವಕ ಶಿಕ್ಷೆಗೆ ಒಳಗಾದವ. ಈತ 2023ನೇ ಸಾಲಿನಲ್ಲಿ ತನ್ನ ಮೇಲೆ ಲೈಂಗಿಕ ದೌರ್ಜನ್ಯವೆಸಗಿರುತ್ತಾನೆಂದು 17 ವರ್ಷದ ಅಪ್ರಾಪ್ತೆ(Minor)ನೀಡಿದ್ದ ದೂರಿನ ಮೇರೆಗೆ ಭದ್ರಾವತಿ ನ್ಯೂ ಟೌನ್ ಪೊಲೀಸ್ ಠಾಣೆಯಲ್ಲಿ ಪೋಕ್ಸೋ(POCSO)ಪ್ರಕರಣ ದಾಖಲಾಗಿತ್ತು.
ಅಂದಿನ ತನಿಖಾಧಿಕಾರಿಯಾಗಿದ್ದ ಭದ್ರಾವತಿ ವೃತ್ತ ನಿರೀಕ್ಷಕ ಜೆ.ಶ್ರೀಶೈಲಕುಮಾರ ಪ್ರಕರಣದ ತನಿಖೆ ಪೂರ್ಣಗೊಳಿಸಿ ನ್ಯಾಯಾಲಯಕ್ಕೆ ದೋಷಾರೋಪಣ ಪಟ್ಟಿ(charge sheet)ಸಲ್ಲಿಸಿದ್ದರು. ಈ ಬಗ್ಗೆ ವಿಚಾರಣೆ ನಡೆಸಿದ ನ್ಯಾಯಾಧೀಶ ನಿಂಗನಗೌಡ ಭ ಪಾಟೀಲ್ ಅವರು ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಯುವಕನಿಗೆ ಕಠಿಣ ಕಾರಾಗೃಹ ಶಿಕ್ಷೆ ಹಾಗೂ ದಂಡ ವಿಧಿಸಿ ಆದೇಶಿಸಿದ್ದಾರೆ. ಸರ್ಕಾರಿ ಅಭಿಯೋಜಕ ಶ್ರೀಧರ್ ಸರ್ಕಾರದ ಪರವಾಗಿ ವಾದ ಮಂಡಿಸಿದ್ದರು.