ಸೊರಬ: ಗ್ರಾಮೀಣ ಪ್ರದೇಶಗಳ ರಸ್ತೆಗಳನ್ನು ಅಭಿವೃದ್ಧಿಪಡಿಸಿ ಜನರಿಗೆ ಸುಗಮ ಹಾಗೂ ಸುರಕ್ಷಿತ ಸಂಚಾರಕ್ಕೆ ಅಗತ್ಯ ಸೌಲಭ್ಯ ಕಲ್ಪಿಸುವುದು ಸರ್ಕಾರದ ಉದ್ದೇಶ ಎಂದು ಸಚಿವ ಮಧು ಬಂಗಾರಪ್ಪ ಹೇಳಿದರು.
ತಾಲೂಕಿನ ಅಂಕರವಳ್ಳಿ ಗ್ರಾಮದ ಎಸ್‌ಸಿ ಕೇರಿಯಿಂದ ಚಂದ್ರಗುತ್ತಿ ರಸ್ತೆವರೆಗೆ ರಸ್ತೆ ಡಾಂಬರೀಕರಣ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದರು.
ಕ್ಷೇತ್ರದ ವಿವಿಧ ಭಾಗಗಳ ಮೂಲ ಸೌಕರ್ಯ ಅಭಿವೃದ್ಧಿಗೆ ಹಂತ ಹಂತವಾಗಿ ಆದ್ಯತೆ ನೀಡಲಾಗುತ್ತಿದೆ. ಸದ್ಯದಲ್ಲಿ ಮತ್ತಷ್ಟು ಅನುದಾನ ಬಿಡುಗಡೆಯಾಗಲಿದೆ. ಈ ಕಾಮಗಾರಿಗಳನ್ನು ೆಬ್ರವರಿಯೊಳಗೆ ಪೂರ್ಣಗೊಳಿಸುವಂತೆ ಸೂಚಿಸಲಾಗಿದೆ ಎಂದರು.
ಗ್ಯಾರಂಟಿ ಸಮಿತಿ ಅಧ್ಯಕ್ಷ ಜಯಶೀಲ ಗೌಡ ಮಾತನಾಡಿ, ನಮ್ಮ ಗ್ರಾಮಕ್ಕೆ ಈ ಕಾಮಗಾರಿಯಿಂದ ಮುಖ್ಯರಸ್ತೆಯ ಸಂಪರ್ಕಕ್ಕೆ ಅನುಕೂಲವಾಗಲಿದೆ. ಬಹುದಿನದ ಕನಸು ಈಡೇರಿದೆ ಎಂದರು.
ಸೊರಬ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅಣ್ಣಪ್ಪ, ಆನವಟ್ಟಿ ಬ್ಲಾಕ್ ಅಧ್ಯಕ್ಷ ಸದಾನಂದ ಗೌಡ, ಬಗರಹುಕುಂ ಸಮಿತಿ ಅಧ್ಯಕ್ಷ ಎಂ.ಡಿ.ಶೇಖರ್, ವಿಎಸ್‌ಎಸ್‌ಎನ್ ಅಧ್ಯಕ್ಷ ಕೆ.ವಿ.ಗೌಡ, ತಬಲಿ ಬಂಗಾರಪ್ಪ, ಎಚ್.ಗಣಪತಿ, ಪ್ರಭಾಕರ್, ಪ್ರಮುಖರಾದ ಪಾಂಡು, ಸುನಿಲ್ ಗೌಡ, ಎನ್.ಜಿ.ನಾಗರಾಜ್, ತಹಸೀಲ್ದಾರ್ ಕೆ.ಪುರಂದರ, ಇಒ ಶಶಿಧರ್ ಇತರರಿದ್ದರು.