ಮಂಗಳೂರು : ಕಲ್ಕೂರ ಪ್ರತಿಷ್ಠಾನ ಮಂಗಳೂರು ಇದರ ವತಿಯಿಂದ ಅ.10ರಂದು ನಡೆಯಲಿರುವ ಡಾ. ಕೋಟ ಶಿವರಾಮ ಕಾರಂತರ ಜನ್ಮದಿನೋತ್ಸವದ ಅಂಗವಾಗಿ ಅಂಚೆ ಕಾರ್ಡ್‌ನಲ್ಲಿ ಕಾರಂತರ ಚಿತ್ರ ರಚನಾ ಸ್ಪರ್ಧೆೆಯನ್ನು ಹಮ್ಮಿಕೊಳ್ಳಲಾಗಿದೆ.
ಎಸ್‌ಎಸ್‌ಎಲ್‌ಸಿವರೆಗಿನ ವಿಭಾಗ ಮತ್ತು ಮುಕ್ತ ವಿಭಾಗ ಎಂಬ ಎರಡು ವಿಭಾಗಗಳಲ್ಲಿ ಸ್ಪರ್ಧೆ ಏರ್ಪಡಿಸಲಾಗಿದೆ. ಪೆನ್ಸಿಲ್‌ನಿಂದ ಕಪ್ಪು-ಬಿಳುಪು ಚಿತ್ರಗಳನ್ನು ಮಾತ್ರ ರಚಿಸಬೇಕು. ಇದು ರಾಜ್ಯ ಮಟ್ಟದ ಸ್ಪರ್ಧೆಯಾಗಿದ್ದು, ವಿಜೇತರಿಗೆ ಅ.10ರಂದು ಮಂಗಳೂರಿನಲ್ಲಿ ಜರಗಲಿರುವ ಸಮಾರಂಭದಲ್ಲಿ ಬಹುಮಾನ ವಿತರಿಸಲಾಗುವುದು. ಅ.6ರೊಳಗಾಗಿ ಅಂಚೆ ಕಾರ್ಡ್‌ಗಳನ್ನು ಸ್ವ-ವಿಳಾಸ ಮತ್ತು ಸಂಪರ್ಕ ದೂರವಾಣಿ ಸಂಖ್ಯೆಯೊಂದಿಗೆ, ಜಾನ್‌ಚಂದ್ರನ್ (ಸಂಚಾಲಕರು), ಅಂಚೆ ಕಾರ್ಡಿನಲ್ಲಿ ಚಿತ್ರ ರಚನಾ ಸ್ಪರ್ಧಾ ವಿಭಾಗ, ಕಲ್ಕೂರ ಪ್ರತಿಷ್ಠಾನ, ಶ್ರೀಕೃಷ್ಣ ಸಂಕೀರ್ಣ, ಮಹಾತ್ಮ ಗಾಂಧಿ ರಸ್ತೆ, ಕೊಡಿಯಾಲ್‌ಬೈಲ್, ಮಂಗಳೂರು ಈ ವಿಳಾಸಕ್ಕೆ ಕಳುಹಿಸುವಂತೆ ಕಲ್ಕೂರ ಪ್ರತಿಷ್ಠಾನದ ಅಧ್ಯಕ್ಷರಾದ ಎಸ್. ಪ್ರದೀಪ ಕುಮಾರ ಕಲ್ಕೂರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
......................