ಜಿಲ್ಲೆ

ಶ್ರೀ ಶಿವಶಕ್ತಿಧಾಮ ವಾರ್ಷಿಕೋತ್ಸವ

Dharwada - Basavaraj Idli

ಹುಬ್ಬಳ್ಳಿ: ತಾಲೂಕಿನ ಪಾಲಿಕೊಪ್ಪದ ಶ್ರೀ ಶಿವಶಕ್ತಿಧಾಮದಲ್ಲಿ ಪ್ರಥಮ ವಾರ್ಷಿಕೋತ್ಸವದ ಅಂಗವಾಗಿ ಫೆ. 10ರಂದು ವಿವಿಧ ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ.

ಬೆಳಗ್ಗೆಯಿಂದ ವಿವಿಧ ಧಾರ್ಮಿಕ ಪೂಜಾ ವಿಧಿ-ವಿಧಾನಗಳು ನಡೆಯಲಿವೆ. ಪ್ರಧಾನ ದೈವವಾಗಿರುವ ಶ್ರೀ ಆನಂದೇಶ್ವರ ಶಿವಲಿಂಗಕ್ಕೆ ಏಕವಾರ ರುದ್ರಾಭಿಷೇಕ, ಶನೈಶ್ಚರ ಸ್ವಾಮಿಗೆ ತೈಲಾಭಿಷೇಕ ಹಾಗೂ ಎಲ್ಲ ದೇವರಿಗೆ ಪಂಚಾಮೃತ ಅಭಿಷೇಕ ನಡೆಯಲಿದೆ. ರುದ್ರಹೋಮ, ನವಗ್ರಹ ಹೋಮ, ಗಣಪತಿ ಹೋಮಗಳು ನಡೆಯಲಿವೆ. ಪೂರ್ಣಾಹುತಿ ನಡೆದ ನಂತರ ಮಧ್ಯಾಹ್ನ 12.30ಕ್ಕೆ ಮಹಾಮಂಗಳಾರತಿ ಹಾಗು ಭಕ್ತರಿಗೆ ಅನ್ನಸಂತರ್ಪಣೆ ನಡೆಯಲಿದೆ.

ತಮಿಳುನಾಡಿನ ಖ್ಯಾತ ಕಲಾವಿದ ಡಾ. ಶ್ಯಾಮಸುಂದರ್ ಭಾಗವತ ಮತ್ತು ತಂಡದವರು ರಾಧಾ ಕಲ್ಯಾಣ ಭಜನ್ ಕಾರ್ಯಕ್ರಮ ನಡೆಸಿಕೊಡಲಿದ್ದಾರೆ ಎಂದು ಶ್ರೀಕ್ಷೇತ್ರದ ವ್ಯವಸ್ಥಾಪಕ ಆರ್.ರಾಮಚಂದ್ರನ್ ತಿಳಿಸಿದ್ದಾರೆ.