ವಿಜಯಪುರ: ಜಿಲ್ಲಾಡಳಿತ, ಜಿಪಂ ಹಾಗೂ ಕನ್ನಡ ಮತ್ತು ಸಂಸತಿ ಇಲಾಖೆಗಳ ಸಹಯೋಗದಲ್ಲಿ ಮೇ 10 ರಂದು ನಗರದ ಕಂದಗಲ್ಲ ಹನುಮಂತರಾಯ ರಂಗಮಂದಿರದಲ್ಲಿ ಶಿವಶರಣೆ ಹೇಮರಡ್ಡಿ ಮಲ್ಲಮ್ಮ ಜಯಂತಿ ಕಾರ್ಯಕ್ರಮ ನಡೆಯಲಿದೆ.
ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಂ.ಬಿ. ಪಾಟೀಲ ಉದ್ಘಾಟಿಸುವರು. ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ಗೌರವ ಉಪಸ್ಥಿತಿ ಹಾಗೂ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅಧ್ಯಕ್ಷತೆ ವಹಿಸುವರು.
ವಿ.ಪ. ವಿರೋಧ ಪಕ್ಷದ ಮುಖ್ಯ ಸಚೇತಕ ರವಿಕುಮಾರ್ ಎನ್., ನವದೆಹಲಿ ವಿಶೇಷ ಪ್ರತಿನಿಧಿ ಪ್ರಕಾಶ ಹುಕ್ಕೇರಿ, ಕೆಎಸ್ಡಿ ನಿಗಮದ ಅಧ್ಯಕ್ಷ, ಶಾಸಕ ಅಪ್ಪಾಜಿ ನಾಡಗೌಡ, ಸಂಸ ರಮೇಶ ಜಿಗಜಿಣಗಿ, ರಾಜ್ಯಸಭಾ ಸದಸ್ಯೆ ಡಾ. ಸುಧಾ ಮೂರ್ತಿ, ಶಾಸಕರಾದ ಯಶವಂತರಾಯಗೌಡ ಪಾಟೀಲ, ವಿಠ್ಠಲ ಕಟಕಧೋಂಡ, ರಾಜುಗೌಡ ಪಾಟೀಲ, ಅಶೋಕ ಮನಗೂಳಿ, ವಿ.ಪ. ಸದಸ್ಯರಾದ ಹಣಮಂತ ನಿರಾಣಿ, ಸುನೀಲಗೌಡ ಪಾಟೀಲ, ಪಿ.ಎಚ್. ಪೂಜಾರ, ಕೇಶವ ಪ್ರಸಾದ ಎಸ್., ರಾಜ್ಯ ಕೌಶಲಾಭಿವೃದ್ಧಿ ನಿಗಮದ ಅಧ್ಯಕ್ಷ ಕಾಂತಾ ನಾಯ್ಕ, ಬಾಲ ವಿಕಾಸ ಅಕಾಡೆಮಿ ಅಧ್ಯಕ್ಷ ಸಂಗಮೇಶ ಬಬಲೇಶ್ವರ, ವಿಡಿಎ ಅಧ್ಯಕ್ಷ ಕನಾನ್ ಮುಶ್ರೀಫ್ ಹಾಗೂ ಜಿಲ್ಲಾಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಇಲಿಯಾಸ್ ಬೋರಾಮಣಿ ಆಗಮಿಸುವರು.
ಜಿಲ್ಲಾಧಿಕಾರಿ ಟಿ. ಭೂಬಾಲನ್, ಜಿಪಂ ಸಿಇಒ ರಿಷಿ ಆನಂದ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ$್ಮಣ ನಿಂಬರಗಿ ಉಪಸ್ಥಿತರಿರುವರು.
ಸಾಹಿತಿ ಡಾ. ಮಲ್ಲಿಕಾರ್ಜುನ ಮೇತ್ರಿ ವಿಶೇಷ ಉಪನ್ಯಾಸ ಹಾಗೂ ಭಾರತಿ ಕುಂದನಗಾರ (ಸೋನಾರ) ಸುಗಮ ಸಂಗೀತ ಮತ್ತು ಮುತ್ತಪ್ಪ ಸಂಕಣ್ಣವರ ತಂಡದವರು ಸಿ ಕುಲಕ್ಕೆ ಮಾದರಿ ಹೇಮರಡ್ಡಿ ಮಲ್ಲಮ್ಮ ನೃತ್ಯರೂಪಕ ಪ್ರಸ್ತುತಪಡಿಸುವರು ಎಂದು ಕನ್ನಡ ಮತ್ತು ಸಂಸತಿ ಇಲಾಖೆ ಸಹಾಯಕ ನಿರ್ದೇಶಕ ಸಂತೋಷ ಭೋವಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.