ವಿಜಯವಾಣಿ ಸುದ್ದಿಜಾಲ ಧಾರವಾಡ
ಧಾರವಾಡ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ ಸಂಘಗಳ ಒಕ್ಕೂಟಕ್ಕೆ (ಕೆಎಂಎಎಫ್) ಮಾಜಿ ಸಚಿವ, ಶಾಸಕ ವಿನಯ ಕುಲಕರ್ಣಿ ಪತ್ನಿ ಶಿವಲೀಲಾ ಕುಲಕರ್ಣಿ ನಿರ್ದೇಶಕರಾಗಿ ಸರ್ಕಾರದಿಂದ ನಾಮ ನಿರ್ದೇಶನಗೊಂಡಿದ್ದಾರೆ.
ಒಕ್ಕೂಟದ ಆಡಳಿತ ಮಂಡಳಿಯ ಅಧಿಕಾರೇತರ ಸದಸ್ಯರನ್ನಾಗಿ ಶಿವಲೀಲಾ ಕುಲಕರ್ಣಿ ಅವರನ್ನು ನೇಮಿಸಿ ಮಂಗಳವಾರ ಆದೇಶ ಹೊರಡಿಸಲಾಗಿದೆ. ಭಾನುವಾರವಷ್ಟೇ ಆಡಳಿತ ಮಂಡಳಿಗೆ ನಡೆದ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳೇ ಜಯ ಗಳಿಸಿದ್ದಾರೆ. ಇದೀಗ ಸರ್ಕಾರ ಶಿವಲೀಲಾ ಅವರನ್ನು ನೇಮಕ ಮಾಡಿದ್ದರಿಂದ ಅಧ್ಯಕ್ಷ ಸ್ಥಾನದ ಚುನಾವಣೆ ರಂಗೇರಲಿದೆ.