ಜಿಲ್ಲೆ

ಕೆಪಿಸಿಸಿಗೆ ಶಿವಪ್ರಕಾಶ್ ಮಣಿಯಾಣಿ ನೇಮಕ

ಸೌಮ್ಯ ಆರ್

ನೆಲ್ಯಾಡಿ: ಕೆಪಿಸಿಸಿ ಅಸಂಘಟಿತ ಕಾರ್ಮಿಕ ಘಟಕದ ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ಕಾರ್ಯದರ್ಶಿಯಾಗಿ ನೆಲ್ಯಾಡಿಯ ಶಿವ ಪ್ರಕಾಶ್ ಮಣಿಯಾಣಿ ನೇಮಕಗೊಂಡಿದ್ದಾರೆ. ಕೆಪಿಸಿಸಿ ಅಸಂಘಟಿತ ಕಾರ್ಮಿಕ ಘಟಕ ರಾಜ್ಯಾಧ್ಯಕ್ಷರಾದ ಜಿ.ಎಸ್.ಮಂಜುನಾಥ್ ಅವರ ನಿರ್ದೇಶನದ ಮೇರೆಗೆ ದ.ಕ.ಜಿಲ್ಲಾ ಘಟಕ ಅಧ್ಯಕ್ಷ ಬಿ.ಎಂ.ಅಬ್ಬಾಸ್ ಆಲಿ ನೇಮಕ ಮಾಡಿದ್ದಾರೆ. ಕಡಬ ತಾಲೂಕು ನೆಲ್ಯಾಡಿ ಗ್ರಾಮದ ಪಡುಬೆಟ್ಟು ಬೀದಿಮಜಲು ನಿವಾಸಿ ಶಿವಪ್ರಕಾಶ್ ನೆಲ್ಯಾಡಿ ವಲಯ ಯುವ ಕಾಂಗ್ರೆಸ್ ಅಧ್ಯಕ್ಷರಾಗಿ, ಸುಳ್ಯ ವಿಧಾನಸಭಾ ಕ್ಷೇತ್ರದ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ, ವಿವಿಧ ಸಂಘ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ.