ಜಿಲ್ಲೆ

ಸೋ.ಪೇಟೆ ವ್ಯಾಪ್ತಿಯಲ್ಲೂ ವಿಶೇಷ ಪೂಜೆ

Mysuru - Desk - Yashavanth Kumar N

ಸೋಮವಾರಪೇಟೆ: ಪಟ್ಟಣ ಸೇರಿದಂತೆ ಗ್ರಾಮೀಣ ಭಾಗದ ದೇವಾಲಯಗಳಲ್ಲಿ ಮಹಾಶಿವರಾತ್ರಿ ಅಂಗವಾಗಿ ವಿಶೇಷ ಪೂಜೆ ನೆರವೇರಿದವು. ಶಾಂತಳ್ಳಿಯ ಶ್ರೀ ಕುಮಾರಲಿಂಗೇಶ್ವರ ದೇವಾಲಯ, ಪುಷ್ಟಗಿರಿ ಬೆಟ್ಟದಲ್ಲಿನ ಶ್ರೀ ಶಾಂತಮಲ್ಲಿಕಾರ್ಜುನ ದೇವಾಲಯ, ಗೌಡಳ್ಳಿ ನವದುರ್ಗಾ ಪರಮೇಶ್ವರಿ ದೇವಾಲಯ ಸೇರಿದಂತೆ ವಿವಿಧೆಡೆ ವಿಶೇಷ ಪೂಜೆ ನಡೆಯಿತು.
ಪುಷ್ಪಗಿರಿ ಬೆಟ್ಟದ ಮೇಲಿನ ದೇವಾಲಯಕ್ಕೆ ಗ್ರಾಮಸ್ಥರು ತೆರಳಿ ಪೂಜೆ ಸಲ್ಲಿಸಿದರು. ಶಾಂತ ಮಲ್ಲಿಕಾರ್ಜುನ ದೇವಾಲಯದಲ್ಲಿ ಹಾಲಿನ ಅಭಿಷೇಕ, ಪಂಚಾಮೃತ ಅಭಿಷೇಕ, ರುದ್ರಾಭಿಷೇಕ ನಡೆಯಿತು. ಕ್ಷೇತ್ರಕ್ಕೆ ಆಗಮಿಸಿದ್ದ ಭಕ್ತರಿಗೆ ಅನ್ನ ಸಂತರ್ಪಣೆ ನಡೆಯಿತು.
ಸಮೀಪದ ಅರಿಶಿಣಕುಪ್ಪೆಯ ಶ್ರೀ ಮಂಜುನಾಥಸ್ವಾಮಿ ಕ್ಷೇತ್ರದಲ್ಲಿ 1108 ಎಳನೀರು ಅಭಿಷೇಕ, ಮಹಾಗಣಪತಿ ಹೋಮ, ಅನ್ನ ಸಂತರ್ಪಣೆ ನಡೆಯಿತು. ರಾತ್ರಿ ಭಜನಾ ಕಾರ್ಯಕ್ರಮ ನಡೆಯಿತು.