ವಿ.ಶ್ರೀನಿವಾಸಪ್ರಸಾದ್ ಅವರ ನಿಧನದ ಸುದ್ದಿ ಕೇಳಿ ಆಘಾತವಾಗಿದೆ. ಅವರು ಶೋಷಿತ ವರ್ಗದ ದ್ವನಿಯಾಗಿ ಸಮುದಾಯಕ್ಕೆ ಶಕ್ತಿ ತುಂಬಿದ್ದರು ಎಂದು ಶಾಸಕ ಜಿ.ಟಿ.ದೇವೇಗೌಡ ತಿಳಿಸಿದರು.
50 ವರ್ಷದ ರಾಜಕಾರಣ ಮಾಡಿ ಪುಸ್ತಕ ಬರೆದು ರಾಜಕೀಯ ನಿವೃತ್ತಿ ಹೊಂದಿದ್ದರು. ಮೊದಲ ಬಾರಿಗೆ ಕೆ.ಆರ್. ಕ್ಷೇತ್ರದಿಂದ ಸ್ಪರ್ಧಿಸಿ ಸೋತಿದ್ದರು. 1980ರಲ್ಲಿ ಲೋಕಸಭಾ ಪ್ರವೇಶ ಮಾಡಿದ್ದ ಅವರು, 6 ಬಾರಿ ಸಂಸದರಾಗಿ, ಕೇಂದ್ರ ಸಚಿವರಾಗಿದ್ದರು. 2013ರಲ್ಲಿ ರಾಜ್ಯ ರಾಜಕೀಯ ಪ್ರವೇಶ ಮಾಡಿದ ಅವರು, ಕಂದಾಯ ಮಂತ್ರಿಯಾಗಿ ಅನೇಕ ಒಳ್ಳೆಯ ಕಾರ್ಯಕ್ರಮ ಕೊಟ್ಟವರು. ಭಗವಂತ ಅವರ ಆತ್ಮಕ್ಕೆ ಶಾಂತಿ ಕೊಡಲಿ ಹಾಗೂ ಅವರ ಕುಟುಂಬಕ್ಕೆ ದುಃಖ ಭರಿಸುವ ಶಕ್ತಿ ಕೊಡಲಿ.