ಮಂಗಳೂರು: ಪೊಲೀಸರ ಮೇಲೆ ಹಲ್ಲೆ ನಡೆಸಿ ಪರಾರಿಯಾಗಲು ಯತ್ನಿಸಿದ ಕುಖ್ಯಾತ ಆರೋಪಿಯನ್ನು ಕೊಣಾಜೆ ಪೊಲೀಸರು ಕಾಲಿಗೆ ಗುಂಡು ಹೊಡೆದು ಬಂಧಿಸಿದ್ದಾರೆ.
ರೌಡಿ ಶೀಟರ್ ಮುಕ್ತಾರ್ ಗುಂಡೇಟಿಗೊಳಗಾದ ಆರೋಪಿ. ಉಳ್ಳಾಲ ಇನ್ ಸ್ಪೆಕ್ಟರ್ ಸಂದೀಪ್ ಗುಂಡು ಹಾರಿಸಿದ್ದಾರೆ. ಅಸೈಗೊಳಿಯಲ್ಲಿರುವ ಕೊಣಾಜೆ ಪೊಲೀಸ್ ಠಾಣೆ ಹಿಂಬದಿ ಘಟನೆ ನಡೆದಿದೆ. ಪೊಲೀಸರು ಒಂದು ಸುತ್ತು ಗಾಳಿಯಲ್ಲಿ ಗುಂಡು ಹಾರಿಸಿ ಶರಣಾಗಲು ತಿಳಿಸಿದ್ದಾರೆ. ಆತ ತಪ್ಪಿಸಿಕೊಂಡು ಪರಾರಿಯಾಗಲು ಯತ್ನಿಸಿದಾಗ ಕಾಲಿಗೆ ಗುಂಡು ಹೊಡೆದಿದ್ದಾರೆ. ಗಾಯಗೊಂಡ ಆರೋಪಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಆರೋಪಿ ವಿರುದ್ಧ 15 ಪ್ರಕರಣ ದಾಖಲಾಗಿದೆ. 6 ಪ್ರಕರಣಗಳಲ್ಲಿ 5 ವರ್ಷದಿಂದ ಪೊಲೀಸರಿಗೆ ಸಿಕ್ಕಿರಲಿಲ್ಲ. ಸ್ಥಳಕ್ಕೆ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ಭೇಟಿ ನೀಡಿದ್ದಾರೆ.