ಜಿಲ್ಲೆ

ಕುಮಟಾ ಆಕ್ಸಿಸ್ ಬ್ಯಾಂಕ್​ನಲ್ಲಿ ಶಾರ್ಟ್ ಸರ್ಕ್ಯೂಟ್

ಕುಮಟಾ: ಪಟ್ಟಣದ ರಾಷ್ಟ್ರೀಯ ಹೆದ್ದಾರಿ 66ರ ಅಂಚಿಗೆ ಮಣಕಿ ಮೈದಾನದ ಎದುರು ಇರುವ ಸನ್ಮಾನ ಲಾಜ್ ಕಟ್ಟಡದಲ್ಲಿರುವ ಆಕ್ಸಿಸ್ ಬ್ಯಾಂಕ್​ನಲ್ಲಿ ಶಾರ್ಟ್ ಸರ್ಕ್ಯೂಟ್​ನಿಂದ ಬೆಂಕಿ ಅವಘಡವಾಗಿ ಲಕ್ಷಾಂತರ ರೂ. ಮೌಲ್ಯದ ಪರಿಕರಗಳು ಸುಟ್ಟುಹೋದ ಘಟನೆ ಮಂಗಳವಾರ ಬೆಳಗ್ಗೆ ಸಂಭವಿಸಿದೆ.

ಆಕ್ಸಿಸ್ ಬ್ಯಾಂಕ್​ನಲ್ಲಿ ಬೆಳಗ್ಗೆ 6.40 ಸುಮಾರಿಗೆ ಶಾರ್ಟ್ ಸರ್ಕ್ಯೂಟ್​ನಿಂದ ಬೆಂಕಿ ಹೊತ್ತಿಕೊಂಡಿತ್ತು.

ಘಟನೆಯ ಮಾಹಿತಿ ಪಡೆದ ಕುಮಟಾ ಅಗ್ನಿಶಾಮಕ ದಳದವರು ಆಗಮಿಸಿ ಕೆಲ ನಿಮಿಷಗಳಲ್ಲೇ ಬೆಂಕಿ ನಂದಿಸಿದ್ದಾರೆ. ಅಷ್ಟರಲ್ಲಾಗಲೇ ಬ್ಯಾಂಕಿನಲ್ಲಿದ್ದ ಕಂಪ್ಯೂಟರ್, ಪ್ರಿಂಟರ್, ಕೆಲವು ಪೀಠೋಪಕರಣಗಳು, ಎಸಿ, ಕೌಟಿಂಗ್ ಮಷಿನ್, ಟಿವಿ ಸಹಿತ ಸುಮಾರು ನಾಲ್ಕು ಲಕ್ಷ ರೂ.ಗಳಿಗೂ ಹೆಚ್ಚು ಅಧಿಕ ಮೊತ್ತದ ಸಾಮಗ್ರಿಗಳು ಬೆಂಕಿಗೆ ಆಹುತಿಯಾಗಿದೆ.

ಅಗ್ನಿಶಾಮಕ ಠಾಣಾಧಿಕಾರಿ ತಮ್ಮಯ್ಯ ಎನ್. ಗೊಂಡ ನೇತೃತ್ವದಲ್ಲಿ ಸಿಬ್ಬಂದಿ ಕುಮಾರ ಗೌಡ, ದಿನೇಶ ವೆಂಗುರೇಕರ್, ಮಹೇಶ ಶೆಟ್ಟಿ, ಗುರುನಾಥ ನಾಯಕ, ವಿಷ್ಣು ಗೌಡ, ಅಜಯ ನಾಯಕ, ಇತರರು ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಸಿದರು.