ಜಿಲ್ಲೆ

ಶಾರ್ಟ್‌ಸರ್ಕ್ಯೂಟ್ : ಮೈಸೂರಿನ ಮನೆಯೊಂದರಲ್ಲಿ ಕಾಣಿಸಿಕೊಂಡ ಬೆಂಕಿ

ಮೈಸೂರು: ನಗರದ ನಾರಾಯಣಶಾಸ್ತ್ರಿ ರಸ್ತೆಯ ಮನೆಯೊಂದರಲ್ಲಿ ಭಾನುವಾರ ಮಧ್ಯಾಹ್ನ ಬೆಂಕಿ ಕಾಣಿಸಿಕೊಂಡು ಸಾಕಷ್ಟು ಪ್ರಮಾಣದಲ್ಲಿ ನಷ್ಟ ಉಂಟಾಗಿದೆ.

ಮಂಜುನಾಥ್ ಎಂಬವರ ಮನೆಯಲ್ಲಿ ಮಧ್ಯಾಹ್ನ ಬೆಂಕಿ ಕಾಣಿಸಿಕೊಂಡಿತು. ಇವರ ಮನೆಯ ಮೊದಲ ಅಂತಸ್ತಿನಲ್ಲಿ ಐಸ್‌ಕ್ರೀಂ ತಯಾರಿಕೆ ಮಾಡಲಾಗುತ್ತದೆ. ಬೆಂಕಿಯಿಂದ ಐಸ್‌ಕ್ರೀಂ ಯಂತ್ರಗಳು ಮತ್ತು ರೆಫ್ರೀಜರೇಟರ್‌ಗೆ ಹಾನಿಯಾಗಿದೆ. ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ಅಗ್ನಿ ಶಾಮಕ ಸಿಬ್ಬಂದಿ ಬೆಂಕಿ ನಂದಿಸಿದರು.