ತುಮಕೂರು: ಈಗ ಹೊಸದಾಗಿ 600 ಪಿಎಸ್ಐ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ ಹೇಳಿದರು.
ನಗರದಲ್ಲಿ ಗುರುವಾರ ಸ್ವಾತಂತ್ರೊ$್ಯತ್ಸವದಲ್ಲಿ ಭಾಗಿಯಾದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 403 ಪಿಎಸ್ಐ ಹುದ್ದೆಗಳಿಗೆ ಪರೀಕ್ಷೆ ನಡೆಸಲಾಗಿದ್ದು, ಫಲಿತಾಂಶ ನಿರೀಕ್ಷೆಯಲ್ಲಿದ್ದೇವೆ. ರಾಜ್ಯದಲ್ಲಿ ಕಳೆದ 4 ವರ್ಷಗಳಿಂದ ನೇಮಕಾತಿ ಮಾಡದೇ ಬಾಕಿ ಉಳಿದಿದ್ದ 20,000 ಕಾನ್ಸ್ಟೇಬಲ್ ಹುದ್ದೆಗಳ ನೇಮಕಾತಿಗೆ ಕ್ರಮ ಕೈಗೊಳ್ಳಲಾಗುವುದು ಎಂದರು.
ಪೊಲೀಸ್ ಇಲಾಖೆಯಲ್ಲಿ ಯಾವುದೇ ಮುಂಬಡ್ತಿ ಪ್ರಕರಣಗಳು ಬಾಕಿ ಇರುವುದಿಲ್ಲ. ಪ್ರತಿ ಜಿಲ್ಲೆಯಲ್ಲಿಯೂ ಹೊಸದಾಗಿ 1 ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಹುದ್ದೆಯನ್ನು ಸೃಜಿಸಲಾಗಿದ್ದು, ರಾಜ್ಯದಲ್ಲಿ ಒಟ್ಟು 30 ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ನೇಮಕ ಮಾಡಿಕೊಳ್ಳಲಾಗಿದೆ. ಹೊಸದಾಗಿ ನೇಮಕ ಮಾಡಿಕೊಂಡಿರುವ 545 ಪಿಎಸ್ಐ ನೇಮಕಾತಿ ಆದೇಶ ತಿಂಗಳಾಂತ್ಯದಲ್ಲಿ ನೀಡಲಾಗುವುದು ಎಂದು ತಿಳಿಸಿದರು.