ಜಿಲ್ಲೆ

ಸಚಿವ ಸಂಪುಟದಿಂದ ಕೈಬಿಡಬೇಕು

Davangere - Desk - Mahesh Babu E

ಚಳ್ಳಕೆರೆ: ಡಿ.ಸುಧಾಕರ್ ಅವರನ್ನು ರಾಜ್ಯ ಸರ್ಕಾರ ಸಚಿವ ಸಂಪುಟದಿಂದ ಕೂಡಲೇ ವಜಾ ಮಾಡಬೇಕೆಂದು ಮಾದಿಗ ಮಹಾಸಭಾ ಜಿಲ್ಲಾಧ್ಯಕ್ಷ, ನಗರಸಭಾ ಮಾಜಿ ಸದಸ್ಯ ಎಂ.ಶಿವಮೂರ್ತಿ ಆಗ್ರಹಿಸಿದ್ದಾರೆ.

ನಗರದ ಪ್ರವಾಸಿ ಮಂದಿರದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ದಲಿತರ ಭೂಮಿ ಕಬಳಿಕೆ ಮಾಡಿರುವ ಮತ್ತು ಜಾತಿ ನಿಂದನೆ ಆರೋಪದಲ್ಲಿ ದೂರು ದಾಖಲಾಗಿದ್ದರೂ, ಸುಧಾಕರ್ ವಿರುದ್ಧ ಇದುವರೆಗೂ ಯಾವುದೇ ಕ್ರಮ ಕೈಗೊಂಡಿಲ್ಲದಿರುವುದು ಸರಿಯಲ್ಲ ಎಂದು ಹೇಳಿದರು.

ತಹಸೀಲ್ದಾರ್‌ಗೆ ಮನವಿ ಸಲ್ಲಿಕೆ: ಸುಧಾಕರ್ ವಿರುದ್ಧ ಕ್ರಮಕ್ಕೆ ಒತ್ತಾಯಿಸಿ ದಲಿತ ಸಂಘರ್ಷ ಸಮಿತಿ (ಪರಿವರ್ತನಾ ವಾದ) ಪದಾಧಿಕಾರಿಗಳು ಬುಧವಾರ ತಹಸೀಲ್ದಾರ್ ರೇಹಾನ್ ಪಾಷಾ ಅವರಿಗೆ ಮನವಿ ಸಲ್ಲಿಸಿ, ಸಚಿವ ಸ್ಥಾನದಿಂದ ವಜಾ ಮಾಡಬೇಕೆಂದು ಆಗ್ರಹಿಸಿದರು.