ಬಂಟ್ವಾಳ: ಶ್ರೀರಾಮ ಪ್ರಥಮ ದರ್ಜೆ ಮಹಾವಿದ್ಯಾಲಯದ 2025-26ನೇ ಶೈಕ್ಷಣಿಕ ವರ್ಷದ ವಿದ್ಯಾರ್ಥಿಗಳನ್ನು ಸ್ವಾಗತಿಸುವ ಕಾರ್ಯಕ್ರಮ ಆಗತ-ಸ್ವಾಗತ-2025 ಬುಧವಾರ ಆಜಾದ್ ಭವನದಲ್ಲಿ ನಡೆಯಿತು.
ಗಣ್ಯರಿಂದ ದೀಪ ಪ್ರಜ್ವಲನ, ವಿದ್ಯಾರ್ಥಿಗಳಿಂದ ಸರಸ್ವತಿ ವಂದನೆ, ಬಳಿಕ ಗಣ್ಯ ಅತಿಥಿಗಳು ಅಗ್ನಿಹೋತ್ರಕ್ಕೆ ಹವಿಸ್ಸು ಅರ್ಪಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ವಿದ್ಯಾರ್ಥಿಗಳಿಗೆ, ಉಪನ್ಯಾಸಕರಿಗೆ ಆರತಿ ಬೆಳಗಿ ಸ್ವಾಗತಿಸಲಾಯಿತು. ವಿದ್ಯಾರ್ಥಿಗಳು ಹಿರಿಯರ ಆಶೀರ್ವಾದ ಪಡೆದರು.
ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘ ಅಧ್ಯಕ್ಷ ಡಾ.ಪ್ರಭಾಕರ ಭಟ್ ಕಲ್ಲಡ್ಕ ಅಧ್ಯಕ್ಷತೆ ವಹಿಸಿದ್ದರು. ಮಂಗಳೂರು ವಿವಿ ಕುಲಪತಿ ಡಾ.ಪಿ.ಎಲ್.ಧರ್ಮ, ಕಾಸರಗೋಡು ಬಿಜೆಪಿ ಜಿಲ್ಲಾಧ್ಯಕ್ಷೆ ಎಂ.ಎಲ್.ಅಶ್ವಿನಿ, ಉದ್ಯಮಿ ಬಲರಾಮ ಆಚಾರ್ಯ, ರಾಜಿ ಬಲರಾಮ ಆಚಾರ್ಯ, ಮುರಳೀಧರ, ಮೀರಾ ಮುರಳಿ ಉಪಸ್ಥಿತರಿದ್ದರು. ರಾಷ್ಟ್ರ ಸೇವಿಕಾ ಸಮಿತಿಯ ದಕ್ಷಿಣ ಪ್ರಾಂತದ ಮಾರ್ಗದರ್ಶಕ ಮಂಡಳಿ ಸದಸ್ಯೆ ಡಾ.ಕಮಲಾ ಪ್ರಭಾಕರ ಭಟ್, ವಿದ್ಯಾಕೇಂದ್ರ ಸಂಚಾಲಕ ವಸಂತ ಮಾಧವ, ಪದವಿ ಕಾಲೇಜು ಪ್ರಾಂಶುಪಾಲ ಕೃಷ್ಣ ಪ್ರಸಾದ್ ಕಾಯರಕಟ್ಟೆ ಹಾಜರಿದ್ದರು. ಅತಿಥಿಗಳು ಕಾಲೇಜು ಮಾಹಿತಿ ಕೈಪಿಡಿ ಶಿಕ್ಷಣ ದರ್ಶಿನಿ ಬಿಡುಗಡೆಗೊಳಿಸಿದರು. ವಿದ್ಯಾರ್ಥಿನಿಯರಾದ ಧನುಶ್ರೀ ವಂದಿಸಿದರು. ದಿವ್ಯಾಲಕ್ಷ್ಮೀ ಕಾರ್ಯಕ್ರಮ ನಿರೂಪಿಸಿದರು.