ಹೊಳೆನರಸೀಪುರ ಶ್ರೀ ಲಕ್ಷ್ಮೀ ನರಸಿಂಹಸ್ವಾಮಿ ದೇವಾಲಯದಲ್ಲಿ ಹಾಸನ ಲೋಕಸಭಾ ಕಾಂಗ್ರೆಸ್ ಅಭ್ಯರ್ಥಿ ಶ್ರೇಯಸ್ ಎಂ. ಪಟೇಲ್ ಪೂಜೆ ಸಲ್ಲಿಸಿದರು. 
ಜಿಲ್ಲೆ

ಶ್ರೀ ಲಕ್ಷ್ಮೀನರಸಿಂಹಸ್ವಾಮಿ ದೇವಾಲಯದಲ್ಲಿ ಪೂಜೆ

ಹೊಳೆನರಸೀಪುರ: ಹಾಸನ ಲೋಕಸಭಾ ಕಾಂಗ್ರೆಸ್ ಅಭ್ಯರ್ಥಿ ಶ್ರೇಯಸ್ ಎಂ. ಪಟೇಲ್ ತಮ್ಮ ನಾಮಪತ್ರ ಸಲ್ಲಿಕೆಗೆ ಮೊದಲು ಪಟ್ಟಣದ ಶ್ರೀ ಲಕ್ಷ್ಮೀನರಸಿಂಹಸ್ವಾಮಿ ದೇವಾಲಯಕ್ಕೆ ಕುಟುಂಬ ಸಮೇತ ತೆರಳಿ ಪೂಜೆ ಸಲ್ಲಿದರು. ವಿಶೇಷ ಪೂಜೆ ನಂತರ ತಮ್ಮ ಸ್ವಗ್ರಾಮ ಕೆರಗೋಡು ಗ್ರಾಮಕ್ಕೆ ತೆರಳಿ ತಮ್ಮ ತಾತ ದಿವಂಗತ ಜಿ.ಪುಟ್ಟಸ್ವಾಮಿಗೌಡ ಹಾಗೂ ತಂದೆ ದಿ.ಮಹೇಶ್‌ಗೌಡ ಅವರ ಸಮಾಧಿಗೆ ಪೂಜೆ ಸಲ್ಲಿಸಿ, ಬೆಂಬಲಿಗರು ಹಾಗೂ ಕಾರ್ಯಕರ್ತರೊಂದಿಗೆ ಹಾಸನಕ್ಕೆ ತೆರಳಿದರು. ಮುಖಂಡರಾದ ಹರದನಹಳ್ಳಿ ಪುಟ್ಟರಾಜು, ವಕೀಲ ಎಚ್.ಕೆ.ಹರೀಶ್, ಹರದನಹಳ್ಳಿ ಹೇಮಂತಕುಮಾರ್, ವಸಂತ್, ಕಡವಿನಕೋಟೆ ಗ್ರಾಮದ ಮುಖಂಡ ಹಾಗೂ ತಾಲೂಕು ಪಂಚಾಯಿತಿ ಮಾಜಿ ಸದಸ್ಯ ಕೆ.ಕೆ.ಲೋಕೇಶ್, ವಕೀಲ ಮಂಜುನಾಥ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಚ್.ಟಿ.ಲಕ್ಷ್ಮಣ್, ದಲಿತ ಮುಖಂಡ ರಂಗಸ್ವಾಮಿ ಸೇರಿದಂತೆ ನೂರಾರು ಕಾರ್ಯಕರ್ತರು ಹಾಗೂ ಬೆಂಬಲಿಗರು ಹಾಜರಿದ್ದರು.