ವಿಜಯವಾಣಿ ಸುದ್ದಿಜಾಲ ಧಾರವಾಡ
ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಂಯುಕ್ತ ಆಶ್ರಯದಲ್ಲಿ ನಿಜಶರಣ ಶ್ರೀ ಅಂಬಿಗರ ಜೌಡಯ್ಯ ಜಯಂತಿಯನ್ನು ಜ. 21ರಂದು ಮಧ್ಯಾಹ್ನ 12 ಗಂಟೆಗೆ ನಗರದ ಕರ್ನಾಟಕ ಕುಲಪುರೋಹಿತ ಆಲೂರು ವೆಂಕಟರಾವ್ ಸಾಂಸ್ಕೃತಿಕ ಭವನದಲ್ಲಿ ಆಯೋಜಿಸಲಾಗಿದೆ. ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಹಾಗೂ ಸಭಾಪತಿ ಬಸವರಾಜ ಹೊರಟ್ಟಿ ಗೌರವ ಉಪಸ್ಥಿತರಿರುವರು. ಕಾರ್ಮಿಕ ಸಚಿವ ಸಂತೋಷ ಲಾಡ್ ಕಾರ್ಯಕ್ರಮ ಉದ್ಘಾಟಿಸುವರು. ಶಾಸಕ ಅರವಿಂದ ಚಂದ್ರಕಾAತ ಬೆಲ್ಲದ ಅಧ್ಯಕ್ಷತೆ ವಹಿಸುವರು. ಕಲಘಟಗಿಯ ಚಿಂತಕ ಹನುಮಂತಪ್ಪ ಸರಾವರಿ ವಿಶೇಷ ಉಪನ್ಯಾಸ ನೀಡುವರು ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಕುಮಾರ ಬೆಕ್ಕೇರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.