ಹುಬ್ಬಳ್ಳಿ: ದೇಶಪಾಂಡೆನಗರ ಶ್ರೀ ಕೃಷ್ಣ ಕಲ್ಯಾಣ ಮಂಟಪದಲ್ಲಿ ಸೆ. 6 ಮತ್ತು 7ರಂದು ದಕ್ಷಿಣ ಕನ್ನಡ ದ್ರಾವಿಡ ಬ್ರಾಹ್ಮಣ ಸಮಾಜದ ವತಿಯಿಂದ ಶ್ರೀ ಕೃಷ್ಣ ಜಯಂತಿ ಹಾಗೂ ಶ್ರೀ ಕೃಷ್ಣ ಲಿಲೋತ್ಸವ ಕಾರ್ಯಕ್ರಮ ಆಯೋಜಿಸಲಾಗಿದೆ.
ಸೆ. 6ರಂದು ಶ್ರೀ ಕೃಷ್ಣ ದೇವರಿಗೆ ವಿಶೇಷ ಪೂಜೆ, ರಾತ್ರಿ 11.42ಕ್ಕೆ ಅಘರ್Âಪ್ರಧಾನ, 7ರಂದು ಸಂಜೆ 5 ಗಂಟೆಗೆ ಶ್ರೀ ಕೃಷ್ಣ ಲೀಲೋತ್ಸವ ಮೆರವಣಿಗೆಯು ಶ್ರೀ ಕೃಷ್ಣ ಕಲ್ಯಾಣ ಮಂಟಪದಿಂದ ಹೊರಟು ಬಾಳಿಗಾ ಕ್ರಾಸ್, ವೆರ್ಣೆಕರ ಪ್ಲಾಜ್ ಹಾದು ಶ್ರೀ ಕೃಷ್ಣ ಕಲ್ಯಾಣ ಮಂಟಪದಲ್ಲಿ ಕೊನೆಗೊಳ್ಳಲಿದೆ. ಬಳಿಕ ಸಮಾಜದ ಹಿರಿಯರ ಸನ್ಮಾನ, ಎಸ್ಎಸ್ಎಲ್ಸಿ, ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಸಮಾಜದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ವಿತರಣೆ, ಭಾರ್ಗವ ಸೇವಾದಳದ ವತಿಯಿಂದ ವಿದ್ಯಾರ್ಥಿ ವೇತನ ವಿತರಣೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ.