ಅರಸೀಕೆರೆ: ನಗರಸಭೆಯಲ್ಲಿ ಪ್ರತಿಷ್ಠಾಪಿಸಿದ್ದ ಶ್ರೀ ಪ್ರಸನ್ನ ಗಣಪತಿ ವಿಸರ್ಜನಾ ಮಹೋತ್ಸವ ಶುಕ್ರವಾರ ಮಧ್ಯಾಹ್ನ ವಿಜೃಂಭಣೆಯಿಂದ ನೆರವೇರಿತು. ನಗರಸಭೆ ಅಧ್ಯಕ್ಷ ಸಿ.ಗಿರೀಶ್, ನಗರಸಭಾ ಸದಸ್ಯರು ಹಾಗೂ ಸಿಬ್ಬಂದಿ ವಿಘ್ನ ವಿನಾಶಕನಿಗೆ ವಿಶೇಷ ಪೂಜೆ ಸಲ್ಲಿಸಿದರು.
ಸರ್ವಾಲಂಕೃತ ತೆರೆದ ಟ್ರ್ಯಾಕ್ಟರ್‌ನಲ್ಲಿ ಕಂತೇನಹಳ್ಳಿ ಕೆರೆವರೆಗೆ ಮೆರವಣಿಗೆ ಮಾಡಿದರಲ್ಲದೆ ಕೆಲ ಸದಸ್ಯರು ಹಾಗೂ ಸಿಬ್ಬಂದಿ ಕುಣಿದು ಕುಪ್ಪಳಿಸಿದರು. ಸಂಪ್ರದಾಯದಂತೆ ಧಾರ್ಮಿಕ ವಿಧಿ-ವಿಧಾನಗಳನ್ನು ಪೂರೈಸಿದ ಬಳಿಕ ವಿಸರ್ಜನಾ ಪ್ರಕ್ರಿಯೆ ಸಂಪನ್ನಗೊಂಡಿತು. ನಗರಸಭೆ ಆಡಳಿತದ ವತಿಯಿಂದ ಪ್ರಸಾದ ವಿನಿಯೋಗ ಮಾಡಲಾಯಿತು.
ನಗರಸಭೆಯಲ್ಲಿ ಪ್ರತಿಷ್ಠಾಪಿಸಿದ್ದ ಪ್ರಸನ್ನ ಗಣಪತಿಯನ್ನು ಶುಕ್ರವಾರ ವಿಸರ್ಜನೆ ಮಾಡಲಾಯಿತು.