ರಾಯಚೂರು ಅಪಾರ e್ಞÁನಭಂಡಾರ ಹೊಂದಿದ ಸವಿತಾ ಮಹರ್ಷಿಗಳು ಸಮಾಜಮುಖಿಯಾಗಿ ದಾರಿದೀಪವಾಗಿz್ದÁರೆ. ಯುವ ಸಮುದಾಯ ಅವರ ಹಾದಿಯಲ್ಲಿ ಸಾಗಿ ಆಚಾರ- ವಿಚಾರಗಳನ್ನು ಮೈಗೂಡಿಸಿಕೊಳ್ಳಬೇಕೆಂದು ಗ್ರೇಡ್-೨ ತಹಶೀಲ್ದಾರ್ ಭೀಮರಾಯ ಅವರು ಅಭಿಪ್ರಾಯಪಟ್ಟರು.
ನಗರದ ಪಂಡಿತ ಸಿದ್ದರಾಮ ಜಂಬಲದಿನ್ನಿ ರಂಗಮAದಿರದಲ್ಲಿ ಜಿ¯್ಲÁಡಳಿತ, ಜಿ¯್ಲÁ ಪಂಚಾಯಿತಿ, ಮಹಾನಗರ ಪಾಲಿಕೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಮಂಗಳವಾರ ಆಯೋಜಿಸಿದ್ದ ಶ್ರೀಸವಿತಾ ಮಹರ್ಷಿ ಜಯಂತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ವಿವಿಧ ಜಯಂತಿಗಳನ್ನು ಆಚರಿಸುವ ಮೂಲಕ ಸರ್ಕಾರವು ಮಹಾತ್ಮರ ಆದರ್ಶಗಳ ಹಾದಿಯಲ್ಲಿ ನಡೆಯಲು ಪ್ರೇರೇಪಿಸುತ್ತಿದೆ. ಸಮಾಜದ ಯುವಪೀಳಿಗೆ ಮಹರ್ಷಿಗಳ ಆದರ್ಶಗಳನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಂಡು ಮುನ್ನಡೆಯಬೇಕು ಹಾಗೂ ಆರ್ಥಿಕ, ಸಾಮಾಜಿಕ, ಶೈಕ್ಷಣಿಕವಾಗಿ ಬೆಳೆಯಬೇಕು ಎಂದರು.
ಪಾಲಕರು ತಮ್ಮ ಮಕ್ಕಳಿಗೆ ಉನ್ನತ ಶಿಕ್ಷಣ ಕೊಡಿಸಬೇಕು. ಸರ್ಕಾರದ ವಿವಿಧ ಸೌಲಭ್ಯವನ್ನು ಪಡೆಯಬೇಕು. ಸಂವಿಧಾನದ ಕುರಿತು ತಿಳಿದುಕೊಳ್ಳಬೇಕೆಂದರು.
ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಹಾಯಕ ಪ್ರಾಧ್ಯಾಪಕ ಮಹಾದೇವಪ್ಪ ಉಪನ್ಯಾಸ ನೀಡಿ, ಸವಿತಾ ಸಮಾಜವು ಸಮಾಜದಲ್ಲಿ ವಿಶಿಷ್ಟ ಇತಿಹಾಸ ಹೊಂದಿದೆ. ಶಿವನ ದಿವ್ಯದೃಷ್ಟಿಯಲ್ಲಿ ಜನ್ಮ ತಾಳಿದ ಸವಿತಾ ಮಹರ್ಷಿಯವರು ಪುರಾಣ ಗ್ರಂಥದಲ್ಲಿ ತಮ್ಮದೇ ಆದ ಸ್ಥಾನ ಹೊಂದಿz್ದÁರೆ. ಸಮಾಜದ ಶ್ರೇಷ್ಠತೆಗೆ ಶ್ರಮಿಸಿದ ಮಹಾನ್ ಯುಗ ಪುರುಷರಾಗಿz್ದÁರೆ. ಸಮಾಜಮುಖಿಯಾಗಿ ಬೆಳೆದು ದಾರಿದೀಪವಾಗಿz್ದÁರೆ. ಇಂತಹ ಮಹಾತ್ಮರ ಜಯಂತಿಯನ್ನು ಆಚರಿಸುವ ಮೂಲಕ ಸರ್ಕಾರ ಇವರ ಆದರ್ಶಗಳ ಹಾದಿಯಲ್ಲಿ ನಡೆಯಲು ಬೆಳಕು ತೋರಿಸಿದೆ ಎಂದರು.
ಈ ಸಂದರ್ಭದಲ್ಲಿ ಮಹಾನಗರ ಪಾಲಿಕೆಯ ಅಧ್ಯಕ್ಷರಾದ ನರಸಮ್ಮ ನರಸಿಂಹಲು ಮಾಡಗಿರಿ,ಇ.ರಾಘವೇಂದ್ರ ಇಟಗಿ, ವಿಜಯಭಾಸ್ಕರ್ ಇಟಗಿ, ಗುಂಜಳ್ಳಿ ಭೀಮೇಶ, ವಲ್ಲಾರ ಗೋವಿಂದ, ಸುಮಾ ಗಸ್ತಿ, ಶ್ರೀನಿವಾಸ ಕಲವಲದೊಡ್ಡಿ, ವಲ್ಲಾರ ವೆಂಕಟೇಶ್, ಗಾಯಂತ್ರಿ ಜಿಂದಣ್ಣ, ಇಡಪನೂರು ಆಂಜಿನೇಯ್ಯ, ನರಸಿಂಹ ಮೂರ್ತಿ, ವಿ.ಗೋಪಾಲ, ಎಸ್.ಅನಿಲ್, ಬಸವರಾಜ, ಎನ್.ವೆಂಕಟೇಶ್, ಕೆ.ನರಸಿಂಹಲು, ಸತೀಶ ನೆಲ್ಲಾರ ಸೇರಿದಂತೆ ಅನೇಕರು ಇದ್ದರು.
----------