ಮಂಗಳೂರು : ಶ್ರೀನಿವಾಸ ವಿಶ್ವವಿದ್ಯಾಲಯದ ಇನ್‌ಸ್ಟಿಟ್ಯೂಟ್ ಆಫ್ ಫಿಸಿಯೋಥೆರಪಿ ವತಿಯಿಂದ ‘ಬ್ಲೂಮಿಂಗ್ ವುಮೆನ್ಸ್ ಹೆಲ್ತ್ - ಎಮರ್ಜಿಂಗ್ ಟ್ರೆಂಡ್ಸ್ ಇನ್ ಫಿಸಿಯೋಥೆರಪಿ ‘ ವಿಷಯದ ಬಗ್ಗೆ ರಾಷ್ಟ್ರೀಯ ಮಟ್ಟದ ಫಿಸಿಯೋಥೆರಪಿ ಸಮ್ಮೇಳನ ಹೋಟೆಲ್ ಶ್ರೀನಿವಾಸ್ ಸಭಾಂಗಣದಲ್ಲಿ ನಡೆಯಿತು. ಮಹಿಳೆಯರ ಆರೋಗ್ಯದಲ್ಲಿನ ಇತ್ತೀಚಿನ ಪ್ರಗತಿಗಳು ಮತ್ತು ಸವಾಲುಗಳನ್ನು ಚರ್ಚಿಸಲು ಈ ಸಮ್ನೇಳನ ಆಯೋಜಿಸಲಾಗಿತ್ತು.
ಶ್ರೀನಿವಾಸ ವಿಶ್ವವಿದ್ಯಾಲಯದ ಕುಲಾಧಿಪತಿ ಡಾ. ಸಿಎ ಎ. ರಾಘವೇಂದ್ರ ರಾವ್ ಅಧ್ಯಕ್ಷತೆ ವಹಿಸಿದ್ದರು. ಸಂಸ್ಥೆಯ ಟ್ರಸ್ಟಿ ವಿಜಯಲಕ್ಷ್ಮಿ.ಆರ್.ರಾವ್, ಶ್ರೀನಿವಾಸ ವಿಶ್ವವಿದ್ಯಾಲಯದ ಉಪ ಕುಲಪತಿ ಡಾ. ಕೆ ಸತ್ಯನಾರಾಯಣರೆಡ್ಡಿ, ರಿಜಿಸ್ಟ್ರಾರ್ ಡಾ.ಅಜಯ ಕುಮಾರ್ ಉಪಸ್ಥಿತರಿದ್ದರು.
ಸಂಘಟನಾ ಕಾರ್ಯದರ್ಶಿ ಡಾ.ರಾಧಿಕಾ ಗೋಪಾಲ್ .ಎಸ್. ಸಮ್ಮೇಳನದ ಬಗ್ಗೆ ಮಾಹಿತಿ ನೀಡಿದರು. ಫಿಸಿಯೋಥೆರಪಿ ಸಂಸ್ಥೆಯ ಪ್ರಭಾರ ಡೀನ್ ಡಾ.ತ್ರಿಶಾಲಾ ನೊರೊನ್ಹಾ ಸ್ವಾಗತಿಸಿ, ಡಾ. ಐಶ್ವರ್ಯಾ ಸೋನವಾನೆ ವಂದಿಸಿದರು.