ಕುಶಾಲನಗರ: ಜಿಲ್ಲೆಯ ರಾಜ್ಯ ಸರ್ಕಾರಿ ನೌಕರರ ಕ್ರೀಡಾ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ಸುಂಟಿಕೊಪ್ಪ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ ವಿ.ಜಿ.ಲೋಕೇಶ್ ಮತ್ತು ಲೋಕೋಪಯೋಗಿ ಇಲಾಖೆಯ ಸಹಾಯಕ ಇಂಜಿನಿಯರ್ ವೆಂಕಟೇಶ್ ನಾಯಕ್ ನವರು ಪುರುಷರ ಸಿಂಗಲ್ಸ್, ಮತ್ತು ಡಬಲ್ಸ್‌ನ ಶಟಲ್ ಬ್ಯಾಡ್ಮಿಂಟನ್ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನವನ್ನು ಪಡೆದು ರಾಜ್ಯ ಮಟ್ಟದ ಸ್ಪರ್ಧೆಗೆ ಅಯ್ಕೆಯಾಗಿದ್ದಾರೆ.
ಸಾಂಸ್ಕೃತಿಕ ಸ್ಪರ್ಧೆಯಲ್ಲಿ ಜಾನಪದ ನೃತ್ಯ ವಿಭಾಗದಲ್ಲಿ ಅಭಿವೃದ್ಧಿ ಅಧಿಕಾರಿ, ವಿ.ಜಿ.ಲೋಕೇಶ್ ಮತ್ತು ಅಕ್ಷತಾ ನೇತೃತ್ವದ ತಂಡ ಜಿಲ್ಲೆಯಲ್ಲಿ ಪ್ರಥಮ ಸ್ಥಾನವನ್ನು ಪಡೆದು ರಾಜ್ಯ ಮಟ್ಟಕ್ಕೆ ಅಯ್ಕೆಯಾಗಿದ್ದಾರೆ.