ಪುರುಷರ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟವನ್ನು ಪ್ರಕಾಶ್ ಪೂಜಾರಿ ಉದ್ಘಾಟಿಸಿದರು 
ಜಿಲ್ಲೆ

ಬ್ಯಾಡ್ಮಿಂಟನ್ ಪಂದ್ಯಾಟಕ್ಕೆ ಚಾಲನೆ

ಇಂದಿರಾ ಎನ್ ಕೆ

ಕುಂದಾಪುರ: ಶ್ರೀ ನಾರಾಯಣಗುರು ಯುವಕ ಮಂಡಲ ಕುಂದಾಪುರ ಇದರ ಆಶ್ರಯದಲ್ಲಿ 47ನೇ ಕುಂದಾಪುರ ದಸರಾ ಪ್ರಯುಕ್ತ ಪುರುಷರ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟ ಹಳೆ ಅಳಿವೆಯ ಕೋಸ್ಟಾ ಬ್ಯಾಡ್ಮಿಂಟನ್ ಕ್ಲಬ್ ಭಾನುವಾರ ನಡೆಯಿತು.

ಸಂದೇಶ್ ಪೂಜಾರಿ ಬೀಜಾಡಿ ಅಧ್ಯಕ್ಷತೆ ವಹಿಸಿದ್ದರು. ಉದ್ಯಮಿ ಪ್ರಕಾಶ್ ಪೂಜಾರಿ ಕಾರ್ಯಕ್ರಮ ಉದ್ಘಾಟಿಸಿದರು. ಕೋಡಿ ಬಿಲ್ಲವ ಸಮಾಜ ಸೇವಾ ಸಂಘ ಅಧ್ಯಕ್ಷ ಗಂಗಾಧರ ಪೂಜಾರಿ ಕೋಡಿ, ಕುಂದಾಪುರ ಬಿಲ್ಲವ ಸಂಘ ಮಾಜಿ ಪ್ರಧಾನ ಕಾರ್ಯದರ್ಶಿ ಮಂಜು ಬಿಲ್ಲವ, ಯುವ ಉದ್ಯಮಿ ಮಹೇಶ್ ಕುಮಾರ್ ಪೂಜಾರಿ ಕೋಡಿ ಉಪಸ್ಥಿತರಿದ್ದರು.

ಯುವಕ ಮಂಡಲ ಕ್ರೀಡಾ ಕಾರ್ಯದರ್ಶಿ ಪ್ರಶಾಂತ್ ಪೂಜಾರಿ ಕೋಣಿ ಸ್ವಾಗತಿಸಿ ವಂದಿಸಿದರು. ಶ್ರೀ ನಾರಾಯಣಗುರು ಶೈಕ್ಷಣಿಕ ಮತ್ತು ಸಾಂಸ್ಕೃತಿಕ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ರಾಜೇಶ್ ಕಡ್ಗಿಮನೆ ಕಾರ್ಯಕ್ರಮ ನಿರೂಪಿಸಿದರು.