ಜಿಲ್ಲೆ

ಅನಾರೋಗ್ಯದಿಂದ ಬೇಸತ್ತು ವೃದ್ಧ ಆತ್ಮಹತ್ಯೆ

ರಾಣೆಬೆನ್ನೂರ: ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ವೃದ್ಧರೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಇಲ್ಲಿಯ ಮೃತ್ಯುಂಜಯ ನಗರದಲ್ಲಿ ಮಂಗಳವಾರ ನಡೆದಿದೆ.
ಶಿವಪ್ಪ ಭರಮಪ್ಪ ಮಣಿಗಾರ (79) ಮೃತ ವೃದ್ಧ.
ಇವರು ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದರು. ಆಸ್ಪತ್ರೆಗೆ ತೋರಿಸಿದರೂ ಗುಣವಾಗದ ಕಾರಣ ಮನನೊಂದು ಮನೆಯಲ್ಲಿಯೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಈ ಕುರಿತು ಶಹರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.