ಜಿಲ್ಲೆ

ಒಳ್ಳೆಯದನ್ನು ವಿರೋಧಿಸುವುದೇ ಬಿಜೆಪಿ ಕೆಲಸ: ಸಿಎಂ ಸಿದ್ದರಾಮಯ್ಯ

ಮಂಜುನಾಥ ಕೋಳಿಗುಡ್ಡ

ಬೆಳಗಾವಿ:ಯಾವುದೇ ಒಳ್ಳೆಯ ಕೆಲಸವನ್ನು ವಿರೋಧಿಸುವುದೇ ಬಿಜೆಪಿಯವರ ಅಭ್ಯಾಸ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ನಗರದ ವಿಮಾನ ನಿಲ್ದಾಣ ದಲ್ಲಿ ಜಮ್ಮು ಕಾಶ್ಮೀರದಲ್ಲಿ ಅಪಘಾತಕ್ಕೆ ಈಡಾಗಿ ಹುತಾತ್ಮರಾದ ಯೋಧರಿಗೆ ಅಂತಿಮ ಗೌರವ ಸಲ್ಲಿಕೆ ಮುನ್ನ ಮಾತನಾಡಿದ ಅವರು, ಯಾವುದೇ ಒಳ್ಳೆಯ ಕೆಲಸವನ್ನು ವಿರೋಧಿಸುವುದೇ ಬಿಜೆಪಿಯವರ ಅಭ್ಯಾಸ. ಆದರೆ ಬಿಜೆಪಿಯವರೇ ಆದ ಮಾಜಿ ಸಂಸದ ಪ್ರತಾಪ್ ಸಿಂಹ ಅವರು ಮೈಸೂರು ನಗರಪಾಲಿಕೆಯ ನಿರ್ಧಾರವನ್ನು ಸಮರ್ಥಿಸಿಕೊಂಡಿದ್ದಾರೆ ಎಂದು ತಿಳಿಸಿದರು.