ಜಿಲ್ಲೆ

ಸಿದ್ದಕಟ್ಟೆ ಸಹಕಾರಿಯಲ್ಲಿ ನೆರವು ಹಸ್ತಾಂತರ

ಸೌಮ್ಯ ಆರ್

ಬಂಟ್ವಾಳ: ಸಿದ್ದಕಟ್ಟೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ಸದಸ್ಯರಾಗಿ ಬೆಳೆ ಸಾಲ ಪಡೆದು ಮೃತರಾದ ಸದಸ್ಯರಿಗೆ ಆರ್ಥಿಕ ಸಹಾಯ ನೀಡುವ ಉದ್ದೇಶದಿಂದ ರೈತ ಕಲ್ಯಾಣ ನಿಧಿ ಯೋಜನೆಯಡಿ ಕುಟುಂಬದ ನಾಮಿನಿ 22 ಸದಸ್ಯರಿಗೆ ತಲಾ 10 ಸಾವಿರ ರೂ.ಗಳನ್ನು ಹಸ್ತಾಂತರಿಸಲಾಯಿತು.

ಸಿದ್ದಕಟ್ಟೆ ಹಾಲು ಉತ್ಪಾದಕ ಸಹಕಾರ ಸಂಘದ ಅಧ್ಯಕ್ಷ ರತ್ನಕುಮಾರ್ ಚೌಟ ರೈತ ಕಲ್ಯಾಣ ನಿಧಿಯನ್ನು ಫಲಾನುಭವಿಗಳಿಗೆ ವಿತರಿಸಿದರು. ಸಂಘದ ಅಧ್ಯಕ್ಷ ಪ್ರಭಾಕರ ಪ್ರಭು, ಉಪಾಧ್ಯಕ್ಷ ಸಂದೇಶ್ ಶೆಟ್ಟಿ ಪೊಡುಂಬ, ನಿರ್ದೇಶಕರಾದ ಸತೀಶ್ ಪೂಜಾರಿ, ದಿನೇಶ್ ಪೂಜಾರಿ, ರಶ್ಮಿತ್ ಶೆಟ್ಟಿ, ಚಂದ್ರಶೇಖರ ಶೆಟ್ಟಿ, ಜಾರಪ್ಪ ನಾಯ್ಕ, ವೀರಪ್ಪ ಪರವ, ವಿಶ್ವನಾಥ ಶೆಟ್ಟಿಗಾರ್, ಎ.ಶಿವ ಗೌಡ, ಮಂದಾರತಿ ಎಸ್.ಶೆಟ್ಟಿ, ಪುಷ್ಪಲತಾ ಎಸ್.ಆರ್., ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಆರತಿ ಶೆಟ್ಟಿ ಉಪಸ್ಥಿತರಿದ್ದರು. ಸುಭಾಷ್ ಬಂಗೇರ ಕಾರ್ಯಕ್ರಮ ನಿರೂಪಿಸಿದರು.

ಬೆಳೆ ಸಾಲ ಪಡೆದುಕೊಂಡು ಸಂಘದಲ್ಲಿ ವ್ಯವಹಾರ ಮಾಡಿಕೊಂಡು ಬರುತ್ತಿದ್ದ ರೈತ ಸದಸ್ಯರು ಮರಣ ಹೊಂದಿದಾಗ ಕುಟುಂಬಕ್ಕೆ ಆರ್ಥಿಕ ಸಹಕಾರ ನೀಡುವ ಉದ್ದೇಶದಿಂದ ಸಂಘವು ರೈತ ಕಲ್ಯಾಣ ನಿಧಿ ಯೋಜನೆ ರೂಪಿಸಲಾಗಿದೆ. ಈ ಯೋಜನೆಯಡಿ ಮೃತ ಸದಸ್ಯರ ಕುಟುಂಬಕ್ಕೆ ಸಹಾಯ ನೀಡಲಾಗುತ್ತಿದೆ. ಪ್ರಭಾಕರ ಪ್ರಭು ಸಂಘದ ಅಧ್ಯಕ್ಷ